ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
Advertisement
ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಅರೆ ನಗ್ನ ಫೋಟೋ ನೋಡಿ ರಶ್ಮಿಕಾ ಹೇಳಿದ್ದು ಹೀಗೆ
Advertisement
Advertisement
ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.