ಲಕ್ನೋ: ನಾಯಿ ಬೊಗಳುವ (Barking of a Dog) ವಿಚಾರಕ್ಕೆ ಸಂಬಂಧಿಸಿದಂತೆ ಎರದು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶ (Uttarpradesh) ದ ಬಲ್ಲಿಯಾದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಲಾಲ್ ಮುನಿ (50) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅದರಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗ ಪ್ರಸಾದ್ ತಿವಾರಿ ತಿಳಿಸಿದ್ದಾರೆ.
Advertisement
Advertisement
ಬೈರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿ ಬೊಗಳು ವಿಚಾರಕ್ಕೆ ಮಂಗಳವಾರ ರಾತ್ರಿ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿದ್ದು, ಮಹಿಳೆ ಸಾಸಹಿತ 5 ಮಂದಿ ಗಾಯಗೊಂಡಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಮೀನು ಹಿಡಿಯಲು ಹೋಗಿದ್ದವರ ಮೇಲೆ ಫೈರಿಂಗ್ ಪ್ರಕರಣ- ಮರಳಿನ ವಿಚಾರವೇ ಕೊಲೆಗೆ ಕಾರಣ
Advertisement
ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅದಾಗಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ಮೃತ ಮಹಿಳೆಯ ಮಗ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
Advertisement
ಶಿವಸಾಗರ್ ಬಿಂದ್ ಹಾಗೂ ಆತನ ಮಗ ಅಜಿತ್ ನನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ಇತ್ತ ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಎಸ್ಪಿ ವಿವರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k