ಕೋಮಲ್ ಜೊತೆ ಡ್ಯುಯೆಟ್ ಹಾಡಲು ಬಂದ ಕರಾವಳಿ ಹುಡುಗಿ

ಕೋಮಲ್ (Komal) ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲೂ ಬ್ಯುಸಿಯಾಗುತ್ತಿದ್ದಾರೆ. ಶ್ರೀನಿವಾಸ್ ಮಂಡ್ಯ (Srinivas Mandya) ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ರೋಲೆಕ್ಸ್ ಕೋಮಲ್’ (Rolex) ಚಿತ್ರಕ್ಕೆ ಕೋಮಲ್ ಬಣ್ಣ ಹಚ್ಚುತ್ತಿದ್ದಾರೆ. ಫೋಟೋಶೂಟ್ ಮೂಲಕ ಗಮನ ಸೆಳೆದ ಈ ಚಿತ್ರ ಜನವರಿ 26ರಂದು ಸೆಟ್ಟೇರುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡದಿಂದ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ.
‘ರೋಲೆಕ್ಸ್ ಕೋಮಲ್’ ಚಿತ್ರಕ್ಕೆ ನಾಯಕಿ ಹುಡುಕಾಟದಲ್ಲಿದ್ದ ಚಿತ್ರತಂಡಕ್ಕೆ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ (Sonal Montero) ಜೊತೆಯಾಗಿದ್ದಾರೆ. ಚಿತ್ರದ ಕಥೆ ಕೇಳಿ ಇಂಪ್ರೆಸ್ ಆಗಿರೋ ಸೋನಾಲ್ ಕೋಮಲ್ ಜೊತೆ ನಟಿಸೋಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸ್ಯಾಂಡಲ್ ವುಡ್ ಅಂಗಳದಲ್ಲಿ ಸಖತ್ ಬ್ಯುಸಿಯಾಗಿರೋ ಸೋನಾಲ್ ಮೊಂಟೆರೋ ಹಲವು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ‘ರೋಲೆಕ್ಸ್ ಕೋಮಲ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದು ‘ರೋಲೆಕ್ಸ್ ಕೋಮಲ್’ ಚಿತ್ರತಂಡ ಸೇರಿಕೊಂಡಿದ್ದಾರೆ. ಇದನ್ನೂ ಓದಿ: `ಧಮಾಕ’ ಸಕ್ಸಸ್ ನಂತರ ಕನ್ನಡತಿ ಶ್ರೀಲೀಲಾಗೆ ತೆಲುಗಿನಲ್ಲಿ ಡಿಮ್ಯಾಂಡ್
ಕಂಟೆಂಟ್ ಬೇಸ್ಡ್ ಸಿನಿಮಾವಾಗಿರೋ ಈ ಚಿತ್ರ ನಿರ್ದೇಶಕ ಶ್ರೀನಿವಾಸ್ ಮಂಡ್ಯ ಅವರ ಎರಡನೇ ಸಿನಿಮಾ ವೆಂಚರ್. ಈ ಹಿಂದೆ ‘ಬಿಲ್ ಗೇಟ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಈ ಬಾರಿ ಇಂಟ್ರಸ್ಟಿಂಗ್ ಕಥೆ ಹೊತ್ತು ಬಂದಿದ್ದಾರೆ. ಜನವರಿ 26ರಂದು ಸಿನಿಮಾ ಸೆಟ್ಟೇರಲಿದ್ದು 27ರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.
ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ.
Live Tv
Join our Whatsapp group by clicking the below link
https://chat.whatsapp.com/E6YVEDajTzH06LOh77r25k