ತುಮಕೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಘಟನೆ ತುಮಕೂರಿನ (Tumakuru) ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಿಷಾಬ್ ಪಾಷ (20) ಕೊಲೆಯಾದ ಯುವಕ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ಘಟನೆ ನಡೆದಿದ್ದು, ಹುಡುಗಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾತನಾಡಬೇಕು ಬಾ ಎಂದು ಕರೆಸಿ ಕಿಡಿಗೇಡಿಗಳು ಹೊಟ್ಟೆಭಾಗಕ್ಕೆ ಇರಿದಿದ್ದಾರೆ. ಇದನ್ನೂ ಓದಿ: ಮಸ್ಕ್‌ನ ಸ್ಟಾರ್‌ಲಿಂಕ್‌ಗೆ ಅನುಮತಿ ನೀಡುವ ಮುನ್ನ ನಿರ್ಧಾರ ಪರಿಶೀಲಿಸಿ: ಕೇಂದ್ರಕ್ಕೆ ಜಿಯೋ ಪತ್ರ
ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಯುವಕ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಮಣಿಪುರ-ಅಸ್ಸಾಂ ಗಡಿಯ ನದಿಯಲ್ಲಿ ಮಹಿಳೆ ಸೇರಿ 3 ಮೃತದೇಹಗಳು ಪತ್ತೆ