ಹಾಸನ: ಹೇಮಾವತಿ ನದಿಗೆ (Hemavathi River) ಜಿಗಿದು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ (Holenarasipura) ಪಟ್ಟಣದಲ್ಲಿ ನಡೆದಿದೆ. ಗುತ್ತಿಗೆದಾರ ನದಿಗೆ ಜಿಗಿಯುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದ ವೃದ್ಧ. ವೈಯುಕ್ತಿಕ ಸಮಸ್ಯೆ ಹಾಗೂ ಬೇರೆಯವರಿಗೆ ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಾಸ್ ನೀಡಿಲ್ಲ ಎಂದು ಮನನೊಂದಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮೆಟ್ರೋದಲ್ಲಿ ಗೋಬಿ ತಿಂದವನಿಗೆ ಬಿತ್ತು 500 ರೂ. ದಂಡ!
ನಿನ್ನೆ ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಪಟ್ಟಣದ ಹೇಮಾವತಿ ನದಿಗೆ ಜಿಗಿದು ಸತ್ತಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸತ್ತಾರ್ ನದಿಗೆ ಜಿಗಿಯುವ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶವ ಪತ್ತೆಯಾಗದ ಹಿನ್ನಲೆಯಲ್ಲಿ ಕುಂದಾಪುರದ ಮುಳುಗು ತಜ್ಞರಿಂದ ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಹೊಳೆನರಸೀಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸತ್ತಾರ್ ಶವ ಶೋಧ ಕಾರ್ಯಾಚರಣೆ ನಡೆಸುವ ವೇಳೆ ಅಪರಿಚಿತನ ಶವವೊಂದು ಪತ್ತೆಯಾಗಿದೆ. ಇದನ್ನೂ ಓದಿ: ಹಂಪಿಯಲ್ಲಿ ರೀಲ್ಸ್ ಹುಚ್ಚಾಟ – ಸ್ಮಾರಕಗಳಿಗೆ ರಕ್ಷಣೆ ಕೊಡಿ ಎಂದ ಗ್ರಾಮಸ್ಥರು
Web Stories