ಕಾರವಾರ: ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯನ್ನು ಮೊಸಳೆಗಳು (Crocodile) ಎಳೆದೊಯ್ದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯ (Dandeli) ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಇಂದು ಬೆಳಗ್ಗೆ ನಡೆದಿದೆ.
ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಎಂಬಾತ ಬೆಳಗ್ಗೆ ಕಾಳಿ ನದಿಯಲ್ಲಿ (Kali River) ಈಜಲು ತೆರಳಿದ್ದ. ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಯಲ್ಲಿ ಇಳಿದಿದ್ದಾನೆ. ಈ ವೇಳೆ 2 ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿದೆ. ಇದನ್ನೂ ಓದಿ: ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದ ಗಂಭೀರ್‌ಗೆ ಕೋರ್ಟ್‍ನಿಂದ ಸಮನ್ಸ್
ಇದನ್ನು ಸ್ಥಳೀಯ ಜನರು ನೋಡಿ ಘಟನೆಗೆ ಸಂಬಂಧಿಸಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವ್ಯಕ್ತಿಯ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಕೊಬ್ಬರಿ ಗೋಡಾನ್‍ಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿಗಳು ಭಸ್ಮ