ಶಿವಮೊಗ್ಗ: ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಣೆ ಮಾಡುವಾಗ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಸಿಆರ್ ಪಿಎಫ್ ಯೋಧನಿಗೆ ಪ್ರೇಕ್ಷಕರು ಧರ್ಮದೇಟು ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ರವಿ ಬಿ. ಎಂಬಾತನೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಯೋಧ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ `ಭರ್ಜರಿ’ ಸಿನಿಮಾ ವೀಕ್ಷಣೆ ಮಾಡುವಾಗ ಈ ಘಟನೆ ನಡೆದಿದೆ. ಯುವತಿ ತನ್ನ ಇಡೀ ಕುಟುಂಬದ ಸಮೇತ ಸಿನಿಮಾ ವೀಕ್ಷಣೆಗೆ ಬಂದಿದ್ದರು. ಪಕ್ಕದ ಸೀಟಿನಲ್ಲಿಯೇ ರವಿ ಕುಳಿತಿದ್ದಾನೆ.
Advertisement
ಪದೇ ಪದೇ ಯುವತಿಗೆ ಕಿರುಕುಳ ನೀಡಿದ್ದರಿಂದ ಆಕೆಯ ಕುಟುಂದವರು ಹಾಗೂ ಅಕ್ಕಪಕ್ಕದ ಪ್ರೇಕ್ಷಕರು ಸೇರಿ ಯೋಧನನ್ನು ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿ, ಜಯನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
Advertisement
ವಿಚಾರಣೆ ವೇಳೆ ಮಾತನಾಡಿದ ಯೋಧ ರವಿ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿರುವುದನ್ನು ಒಪ್ಪಿಕೊಂಡಿದ್ದಾನೆ.