ಶಿವಮೊಗ್ಗ: ಆಂಜನೇಯ ಸ್ವಾಮಿಗೆ ಹಾರ ಹಾಕಲು ಹೋದ ದಲಿತ ಯುವಕರ ಮೇಲೆ ಸವರ್ಣೀಯರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ತಡರಾತ್ರಿ ನಡೆದಿದೆ.
ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ದಸರಾ ಹಾಗೂ ಭೂಮಿ ಪೂರ್ಣಿಮೆ ಹಬ್ಬದ ಅಂಗವಾಗಿ ಗುರುವಾರ ರಾತ್ರಿ ಆಂಜನೇಯ ಸ್ವಾಮಿಯ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ದಲಿತರು ಆಂಜನೇಯ ಸ್ವಾಮಿಗೆ ಹೂವಿನ ಹಾರ ಹಾಕಲು ಮುಂದಾಗಿದ್ದಾರೆ. ಅಲ್ಲೇ ಇದ್ದ ಸವರ್ಣೀಯರ ಗುಂಪೊಂದು ಯುವಕರ ಮೇಲೆ ಏಕಾಎಕಿ ದಾಳಿ ನಡೆಸಿ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement
ಇದೇ ವೇಳೆ ಕೆಲ ಕಿಡಿಗೇಡಿಗಳು ದಲಿತರಿಗೆ ಸೇರಿದ ಗೂಡಂಗಡಿಗೆ ಬೆಂಕಿ ಹಚ್ಚಿ ಧ್ವಂಸ ಮಾಡಿದ್ದಾರೆ. ಈ ಘಟನೆಯಿಂದಾಗಿ ಹರಮಘಟ್ಟ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಇನ್ನು ಗ್ರಾಮಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಘಟನೆ ಬಗ್ಗೆ ವಿಚಾರಣೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಡಿಎಆರ್ ತುಕಡಿಗಳನ್ನು ನಿಯೋಜನೆ ಮಾಡಿದ್ದಾರೆ.
Advertisement
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.