ಕೊಪ್ಪಳ: ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ನಗರದ ಗಂಗಾವತಿ ತಾಲೂಕಿನ ಲಕ್ಷ್ಮೀ ಕ್ಯಾಂಪ್ ಏರಿಯಾದಲ್ಲಿ ನಡೆದಿದೆ.
ಲಕ್ಷ್ಮೀ ಕ್ಯಾಂಪ್‍ನಲ್ಲಿರುವ ಉದ್ಯಾನವನದ ಜಾಗದಲ್ಲಿ ಮಸೀದಿ ನಿರ್ಮಿಸಿಕೊಂಡು ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿ, ಕೋಮುಗಲಭೆಗೆ ಪ್ರಚೋದನೆ ಮಾಡಲಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಮುಖಂಡರು ಭಾಷಣವನ್ನು ಖಂಡಿಸಿ, ಪ್ರತಿಭಟನೆಗೆ ಮುಂದಾಗಿದ್ದರು. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್
ಘಟನೆ ಕುರಿತು ಸ್ಥಳಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್