ಬೆಂಗಳೂರು: ಮಂಡ್ಯ ಡಿಹೆಚ್‌ಒ (DHO) ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು (Doctor) ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಮಹಾಲಕ್ಷ್ಮಿ ಲೇಔಟ್‌ನಲ್ಲಿ (Mahalakshmi Layout) ನಡೆದಿದೆ.
ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಇವರು ಮಂಡ್ಯ (Mandya) ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ (Welfare Officer) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ: ಭ್ರೂಣ ಹತ್ಯೆ ಕುರಿತು ನರ್ಸ್ ಮಂಜುಳ ಸ್ಫೋಟಕ ಮಾಹಿತಿ
Advertisement
Advertisement
ಹೃದಯಾಘಾತಕ್ಕೊಳಗಾದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಗೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್‌ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರೆಸ್ಟೋರೆಂಟಲ್ಲಿ ಕೈ ತೊಳೆದು ಬರುವಷ್ಟರಲ್ಲಿ ಪಿಎಸ್‌ಐ ಪಿಸ್ತೂಲ್ ಮಂಗಮಾಯ!
Advertisement
Advertisement
ಬೆಟ್ಟಸ್ವಾಮಿ ಎಂಬ ಅಧಿಕಾರಿಯನ್ನು ಪಾಂಡವಪುರ ಟಿಹೆಚ್‌ಒ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಬೆಟ್ಟಸ್ವಾಮಿ ಪಾಂಡವಪುರದಲ್ಲಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಡಿಹೆಚ್‌ಒ ಬೆಟ್ಟಸ್ವಾಮಿ ಪರವಾಗಿ ಇದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: 900 ಭ್ರೂಣಗಳ ಹತ್ಯೆ ಆರೋಪಕ್ಕೆ ಅಂಜಿ ವಿಷದ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರಾ ವೈದ್ಯ?