ಬ್ಲೂಟೂತ್ ಬಳಸಿ ಕೆಪಿಎಸ್‍ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ವಶಕ್ಕೆ

Public TV
1 Min Read
KPSC GOLMAL

ಯಾದಗಿರಿ: ಕೆಪಿಎಸ್‍ಸಿ ಪರೀಕ್ಷೆಯಲ್ಲಿ (KPSC Exam) ಬ್ಲೂಟೂತ್ ಬಳಸಿ ನಕಲು ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಅಲ್ಲದೇ ಆತನಿಗೆ ಸಹಕರಿಸಿದ ಇಬ್ಬರು ಆರೋಪಿಗಳನ್ನು ಸಹ ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಆರೋಪಿಯನ್ನು ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂದು ಗುರುತಿಸಲಾಗಿದೆ. ಮತ್ತಿಬ್ಬರ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ. ಆರೋಪಿ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದ. ಈ ವೇಳೆ ವಿಚಾರಣೆ ನಡೆಸಿದಾಗ ಆತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸೋದಾಗಿ ಚೈತ್ರಾ ಮಾದರಿಯಲ್ಲೇ ಕೋಟಿ ಕೋಟಿ ವಂಚನೆ- ಆರೋಪಿ ಅರೆಸ್ಟ್

ಆರೋಪಿಗಳನ್ನ ಯಾದಗಿರಿ (Yadgir) ನಗರ ಠಾಣೆಗೆ ಕರೆತಂದು ಎಸ್‍ಪಿ ನೇತೃತ್ವದಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ಪಿಎಸ್‍ಐ ಹಗರಣ ಕಿಂಗ್‍ಪಿನ್ ಆರ್.ಟಿ ಪಾಟೀಲ್ ಗ್ರಾಮದವರು ಎಂದು ತಿಳಿದು ಬಂದಿದೆ.

ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7884 ಅಭ್ಯರ್ಥಿಗಳು ಕೆಪಿಎಸ್ಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ವಿವಿಧ ನಿಗಮ ಮಂಡಳಿಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದರೂ ಆರೋಪಿಗಳು ಈ ತಂತ್ರ ರೂಪಿಸಿದ್ದರು. ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ ಕೆತ್ತನೆ ಕೆಲಸ- ಇದು ನಮ್ಮ ಸೌಭಾಗ್ಯವೆಂದ ಮುಸ್ಲಿಂ ವ್ಯಕ್ತಿ

Web Stories

Share This Article