ಒಂದು ದುರ್ಘಟನೆ ಮಾಸುವ ಮುನ್ನವೇ ಮತ್ತೋರ್ವ ಯಶ್ (Yash) ಅಭಿಮಾನಿಗೆ (Fan) ಗಂಭೀರ ಗಾಯವಾಗಿದೆ. ಯಶ್ ನೋಡುವ ಕಾತರದಲ್ಲಿ ಬೈಕ್ ಅಪಘಾತವಾಗಿದೆ. ಅಭಿಮಾನಿ ನಿಖಿಲ್ ಗೌಡ (22) ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಗದಗದ ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬದ ಅಂಗವಾಗಿ ತಡರಾತ್ರಿ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮುರಳಿ, ನವೀನ್, ಹನುಮಂತ ಎಂಬ ಮೂವರು ನಿಧನರಾಗಿದ್ದು, ಇನ್ನೂಳಿದ ಮೂವರು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ವಿಚಾರ ತಿಳಿದ ಅಭಿಮಾನಿ ನಿಖಿಲ್ ಆಸ್ಪತ್ರೆಗೆ ಬರುವಾಗ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಗಾಯವಾಗಿದೆ. ಇದನ್ನೂ ಓದಿ:ವಿದ್ಯುತ್ ಸ್ಪರ್ಶ ದುರ್ಘಟನೆ ವೇಳೆ ಯಶ್ ಎಲ್ಲಿದ್ದರು?
ಗದಗ ನಗರದ ತೇಜಾನಗರದಲ್ಲಿ ಈ ಘಟನೆ ನಡೆದಿದ್ದು, ಅಭಿಮಾನಿ ನಿಖಿಲ್ ಗೌಡ ಚಿಕಿತ್ಸೆ ಪಡೆಯುತ್ತಿದ್ದಾರೆ.