ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅಗಲಿ ಐದು ತಿಂಗಳು ಕಳೆದರೂ, ಅವರನ್ನು ಆರಾಧಿಸುವವರ ಸಂಖ್ಯೆ ಇಳಿದಿಲ್ಲ. ತಮ್ಮ ನೆಚ್ಚಿನ ನಟನನ್ನು ನಾನಾ ರೀತಿಯಲ್ಲಿ ನೆನಪಿಸುವಂತಹ ಕೆಲಸಗಳನ್ನು ಅವರ ಅಭಿಮಾನಿಗಳು ಮಾಡುತ್ತಿದ್ದಾರೆ. ರಕ್ತದಾನ, ಅಂಗಾಂಗ ದಾನ, ನೇತ್ರದಾನ ಹಾಗೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತಲೇ ಅಪ್ಪು ಅವರನ್ನು ಜೀವಂತವಾಗಿರಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ. ಈಗ ಮತ್ತೊಂದು ಹೊಸ ಕೆಲಸ ಮಾಡುವ ಮೂಲಕ ಅಪ್ಪುವನ್ನು ಕೃಷಿಕರು ಕೂಡ ತಮ್ಮದೇ ಮನೆಮಗ ಎನ್ನುವಂತೆ ಅಪ್ಪಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಮಗುವಿನ ನೆರವಿಗೆ ಬಂದ ರೈಲ್ವೆ ಅಧಿಕಾರಿಗಳು
ಯುಗಾದಿ ಹಬ್ಬದ ಹಿನ್ನೆಲೆ ರೈತರೆಲ್ಲರೂ ಭೂತಾಯಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭ ಮಾಡುವುದು ವಾಡಿಕೆ. ಭೂತಾಯಿಯ ಪೂಜೆಯ ಜತೆ ಜತೆಗೆ ತಮ್ಮಿಷ್ಟದ ದೇವರನ್ನೂ ಈ ಸಂದರ್ಭದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅದರಂತೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ರೈತನೋರ್ವ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಚಟುವಟಿಕೆ ಆರಂಭಿಸಿದ್ದಾನೆ.
ರೈತ ಅಶೋಕ ಕುರಿ ಇಂದು ತನ್ನ ಹೊಲದಲ್ಲಿ ಪುನೀತ್ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ್ದು, ಪುನೀತ್ ರಾಜ್ ಕುಮಾರ್ ಅವರನ್ನು ಉತ್ತಿಲ್ಲ, ಬಿತ್ತಿದ್ದೇವೆ ಎನ್ನುವ ಸಾಲುಗಳನ್ನು ಸಾರ್ಥಕಗೊಳಿಸಿದ್ದಾನೆ. ಸಾಮಾನ್ಯವಾಗಿ ಎಲ್ಲರೂ ಯುಗಾದಿ ದಿನದಂದು ಹೊಸ ವರ್ಷಾಚರಣೆಯ ಸಡಗರದಲ್ಲಿರುತ್ತಾರೆ. ಇಂಥದ್ದೊಂದು ಸಡಗರಕ್ಕೆ ಅಪ್ಪು ಅವರನ್ನು ಸಾಕ್ಷಿಗೊಳಿಸಿದ್ದಾರೆ ಅಶೋಕ ಕುರಿ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್
ಈ ರೈತ ಪುನೀತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ, ಗೌರವ ಸಲ್ಲಿಸಿ ಹೊಸ ವರ್ಷಾವನ್ನು ಬರಮಾಡಿಕೊಂಡಿದ್ದಾರೆ.