ಕಲಬುರಗಿ: ಹಿರಿಯ ಬಿಜೆಪಿ ಮುಖಂಡ (BJP Leader) ಮಹಾಂತಪ್ಪಾ ಆಲೂರೆ ಅವರನ್ನು ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದ ಬಳಿ ಮೂವರು ಅಪರಿಚಿತರು ರಾಡ್, ತಲ್ವಾರ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸೋಲಾಪುರ ಖಾಸಗಿ ಆಸ್ಪತ್ರೆಯಲ್ಲಿ (Private Hospital) ಸಾವನ್ನಪ್ಪಿದ್ದಾರೆ.
ಗುರುವಾರ ಬೆಳಿಗ್ಗೆ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಹೊರವಲಯದಲ್ಲಿ ಏಕಾಏಕಿ ಮೂವರು ಅಪರಿಚಿತರು ಬಂದು ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆದ ತಕ್ಷಣವೇ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಬಿಜೆಪಿ ಮುಖಂಡನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರ್ಷಾನಂದ ಗುತ್ತೇದಾರ್ ಘಟನೆ ಕುರಿತು ಮಾತನಾಡಿದ್ದಾರೆ. ಮಹಾಂತಪ್ಪ ಆಲೂರೆ ನಮ್ಮ ಕುಟುಂಬದ ಒಬ್ಬ ಸದಸ್ಯರಂತಿದ್ದರು. ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿತ್ವ, ಸಹಕಾರ ಸಂಘದ ಮೂಲಕ ಬಡವರಿಗೆ ಸಹಾಯ ಮಾಡಿದ್ದಾರೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಂಬಂಧಿಕರ ಹಲವು ಮನೆಗಳಿಗೆ ಬಂದೇ ಇಲ್ಲ – ಜಾತಿಗಣತಿ ಸ್ವೀಕಾರಕ್ಕೆ ಹೆಬ್ಬಾಳ್ಕರ್ ಆಕ್ಷೇಪ
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ:
ಈ ಘಟನೆ ನೋಡಿದಾಗ ಆಳಂದ ತಾಲ್ಲೂಕಿನಲ್ಲಿ ಹಾಗೂ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಏನೂ ಬೇಕಾಗಿಲ್ಲ. ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗದೇ ಕೊಲೆ ಮಾಡಿದ ರಾಕ್ಷಸರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಸೇನೆಯಲ್ಲಿ ಸಿಲುಕಿದ್ದಾರೆ 20 ಭಾರತೀಯರು – ವಾಪಸ್ ಕರೆತರಲು ಹರಸಾಹಸ