DistrictsHassanKarnatakaLatestMain Post

ಕಾಣೆಯಾಗಿದ್ದ ಮಹಿಳಾ ಪೊಲೀಸ್ ಪೇದೆ ಶವವಾಗಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಪೇದೆ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಸುಧಾ (39) ಮೃತ ಮಹಿಳಾ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿಯ ಪೊದೆಯೊಂದರಲ್ಲಿ ಸುಧಾ ಮೃತದೇಹ ಸಿಕ್ಕಿದೆ. ಇದನ್ನೂ ಓದಿ: ಮಕ್ಕಳಲ್ಲಿ ವಿಪರೀತ ಜ್ವರ – ಸೆ.25 ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

POLICE JEEP

ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸುಧಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗಷ್ಟೇ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಇದೀಗ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಧಾರನ್ನು ಕಾರಿನಲ್ಲಿ ಕರೆದುಕೊಂಡು ಬಂದು ಅವರ ಚಿಕ್ಕಪ್ಪನ ಮಗ ಮಂಜುನಾಥ್ ಹತ್ಯೆಗೈದಿದ್ದಾನೆ ಎಂಬ ವಿಚಾರ ತಿಳಿದುಬಂದಿದೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಸರಲ್ಲಿ ವಿವಾದಾತ್ಮಕ ಪೋಸ್ಟ್ – ಆರೋಪಿಗಳ ವಿರುದ್ಧ ದೂರು

ಸುಧಾ ಅವರನ್ನು ಕೊಲೆ ಮಾಡಿ, ಶುಕ್ರವಾರ ಸಂಜೆ ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುನಾಥ್ ನೇಣಿಗೆ ಶರಣಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಹಾಗೂ ತುಮಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಅರಸೀಕೆರೆ ತಾಲೂಕಿನ ಆಸ್ಪತ್ರೆಗೆ ರವಾನಿಸಲಾಗಿದೆ.

Live Tv

Leave a Reply

Your email address will not be published.

Back to top button