ಬೆಂಗಳೂರು: ಯುವತಿ ವಿಚಾರಕ್ಕೆ ಮೂವರು ಸ್ನೇಹಿತರ ನಡುವೆ ಜಗಳ ನಡೆದ ಘಟನೆ ಸಿಲಿಕಾನ್ ಸಿಟಿಯ (Bengaluru) ಕಂಟೋನ್ಮೆಂಟ್ ಬಳಿಯ ತಿಮ್ಮಯ್ಯ ಸರ್ಕಲ್ ನಲ್ಲಿ ನಡೆದಿದೆ.
ಯುವತಿ ವಿಚಾರಕ್ಕೆ ಗಫರ್ ಮತ್ತು ಹುಸೇನ್ ನಡುವೆ ಜಗಳ ನಡೆದಿದೆ. ಕುಡಿದ ಅಮಲಿನಲ್ಲಿ ಗಲಾಟೆ ಮಾಡಿ ಗಫರ್ ತಲೆಗೆ ಇಬ್ಬರು ಸ್ನೇಹಿತರು ಹೊಡೆದಿದ್ದಾರೆ. ಇದನ್ನೂ ಓದಿ: ಮದ್ವೆಯಾಗೋದಾಗಿ ನಂಬಿಸಿ ಸುಂದರಿ ವಂಚನೆ- ಯುವಕ ಆತ್ಮಹತ್ಯೆ
ಬಿಯರ್ ಬಾಟ್ಲಿ ಮತ್ತು ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಗಫರ್ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆತನನ್ನು ಬೌರಿಂಗ್ ಅಸ್ಪತ್ರೆಗೆ ದಾಖಲಿಸಿದ್ದಾರೆ.
ಹಲ್ಲೆ ಮಾಡಿದ ಹುಸೇನ್ ಹಾಗೂ ಮತ್ತೊಬ್ಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಗಾಯಾಳು ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈ ಸಂಬಂಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]