ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಂಕ್‌ನಲ್ಲಿದ್ದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಕಳೆದ ರಾತ್ರಿ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್‌ನಲ್ಲಿ ಖಾಸಗಿ ಬಸ್ ನಿಂತಿತ್ತು. ಆದರೆ ಮಧ್ಯರಾತ್ರಿ ಸುಮಾರಿಗೆ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಪೆಟ್ರೋಲ್ ಬಂಕ್‌ನಲ್ಲೇ ಮಲಗಿದ್ದ ಸಿಬ್ಬಂದಿಗೆ ಎಚ್ಚರವಾಗಿದೆ. ಬೆಂಕಿಯನ್ನು ನೋಡಿದ ತಕ್ಷಣ ಅಕ್ಕಪಕ್ಕದವರನ್ನು ಕೂಗಿ ಎಬ್ಬಿಸಿದ್ದಾರೆ. ಕೂಡಲೇ ಸ್ಥಳೀಯರು ಬೆಂಕಿಯನ್ನು ನಂದಿಸಿದ್ದಾರೆ.
ಪೆಟ್ರೋಲ್ ಬಂಕ್‌ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಹಾಗೂ ಡಿಸೇಲ್ ಇತ್ತು. ಒಂದು ವೇಳೆ ಪೆಟ್ರೋಲ್ ಬಂಕ್ ಸಿಬ್ಬಂದಿ ಬಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ನೋಡದಿದ್ದರೆ ಹೆಚ್ಚಿನ ಅನಾಹುತವಾಗುತ್ತಿತ್ತು. ಪೆಟ್ರೋಲ್ ಬಂಕ್ ನೌಕರನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸ್ಥಳೀಯರು ಬಸ್ಸಿಗೆ ತಾಗಿದ್ದ ಬೆಂಕಿಯನ್ನು ನಂದಿಸುವಷ್ಟರಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ. ಇದನ್ನೂ ಓದಿ: ದೇವಾಲಯದ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ