ಹಾಸನ: ಲೋಕಸಭಾ ಚುನಾವಣೆಯ ಅಬ್ಬರದ ನಡುವೆ ಕೆಲ ದಿನಗಳಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್ ರೇವಣ್ಣಗೆ ಶುಭಾಶಯಗಳನ್ನು ತಿಳಿಸಿದ್ದಾನೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಪ್ರಜ್ವಲ್ ರೇವಣ್ಣಗೆ ಅಭಿಮಾನಿ ಶುಭಾಶಯಗಳನ್ನು ತಿಳಿಸಿ ಪತ್ರ ಬರೆದಿದ್ದಾನೆ. ಈ ಪತ್ರ ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ಕಚೇರಿ ಬಾಗಿಲ ಬಳಿ ಸಿಕ್ಕಿದೆ.
- Advertisement
ಪತ್ರದಲ್ಲೇನಿದೆ..?: ನೀವು ಈಗಾಗಲೇ ಹಾಸನ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದೀರಿ. ಈ ಸಲವೂ ತಾವುಗಳೇ ಚುನಾಯಿತರಾಗುತ್ತೀರಿ ಎಂದು ನಾನು ನಂಬುತ್ತೇನೆ. ಇನ್ನು ಮುಂದೆಯೂ ಹಾಸನ ಮತ್ತು ಕರ್ನಾಟಕಕ್ಕೆ ತಮ್ಮಿಂದ ಅಭಿವೃದ್ಧಿ ಕೆಲಸಗಳು ಆಗುತ್ತವೆ ಎಂದು ನನಗೆ ವಿಶ್ವಾಸವಿದೆ ಎಂದು ಕುಷ್ಟಗಿ ಮೂಲದ ಶಂಕರಗೌಡ ಎಂಬವರು ಪತ್ರದಲ್ಲಿ ತಿಳಿಸಿದ್ದಾರೆ.
- Advertisement
ಲೋಕಸಭಾ ಚುನಾವಣೆಗೆ ಮೊದಲನೇ ಹಂತದ ಮತದಾನ ಮುಗಿಯುತ್ತಂದೆಯೇ ಸಂಸದರ ಅಶ್ಲೀಲ ವೀಡಿಯೋ ಪ್ರಕರಣ ಸದ್ದು ಮಾಡಿದೆ. ವೀಡಿಯೋ ಕುರಿತು ಸುದ್ದಿಯಾಗುತ್ತಿದ್ದಂತೆಯೇ ಸಂಸದರು ವಿದೇಶಕ್ಕೆ ಹಾರಿದ್ದಾರೆ. ಇತ್ತ ಪ್ರಕರಣವನ್ನು ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿದೆ. ಈಗಾಗಲೇ ತನಿಖೆಗಿಳಿದಿರುವ ಎಸ್‌ಐಟಿ ಅಧಿಕಾರಿಗಳು ತನಿಖೆಗೆ ಹಾಜರಾಗುವಂತೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡಿದೆ. ಆದರೆ ಇಬ್ಬರೂ ವಿಚಾರಣೆಗೆ ಹಾಜರಾಗಿಲ್ಲ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯಲು ಕೋರ್ಟ್‌ನಿಂದ ಯಾವುದೇ ಆದೇಶ ಬಂದಿಲ್ಲ: MEA
ಈ ನಡುವೆ ಪ್ರಜ್ವಲ್ ರೇವಣ್ಣ ಸಮಯ ಕೇಳಿದ್ದಾರೆ. ಹೀಗಾಗಿ ಇದೀಗ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ. ಇತ್ತ ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಈ ಅರ್ಜಿಯ ವಿಚಾರಣೆ ನಡೆಸಲಿದೆ.