ಮಡಿಕೇರಿ: ವಿರಾಜಪೇಟೆ (Virajpet) ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ (Forest officer) ನಾಪತ್ತೆಯಾಗಿದ್ದಾರೆ.
ಪವನ್ (23) ನಾಪತ್ತೆಯಾದ ಅರಣ್ಯ ವೀಕ್ಷಕ. ಮೂಲತಃ ಬಾಳೆಲೆ ಗ್ರಾಮದ ಪವನ್ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯನಿರತರಾಗಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಕಾಲು ಜಾರಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಬೆಲೆ ಮಿತಿ ನ್ಯಾಯುತವಾಗಿಲ್ಲದಿದ್ದರೇ ಜಾಗತಿಕ ಮಾರುಕಟ್ಟೆಗೆ ತೈಲ ಪೂರೈಕೆ ಬಂದ್ – ರಷ್ಯಾ
Advertisement
Advertisement
ಇದೀಗ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮದಲ್ಲಿ ನಾಪತ್ತೆಯಾದ ಪವನ್ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ (Forest Department Staff) ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರು ಹಾಸ್ಟೆಲ್‌ನ ಕಿಟಕಿ ರಾಡ್ ಮುರಿದು ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ