ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

Public TV
1 Min Read
Koppal Death

ಕೊಪ್ಪಳ: ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppal) ತಾಲೂಕಿನ ಮೆತಗಲ್ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಅಮೃತ ಶಿವಪುರ (11) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹುತಾತ್ಮ ಯೋಧ ದಿವಿನ್‌ ಮದುವೆಗೆ ಇನ್ನೆರಡು ತಿಂಗಳು ಬಾಕಿಯಿತ್ತು, ಲಗ್ನಪತ್ರಿಕೆಯೂ ಪ್ರಿಂಟ್‌ ಆಗಿತ್ತು!

ಎಳ್ಳ ಅಮವಾಸ್ಯೆ ಹಿನ್ನೆಲೆ ಕುಟುಂಬಸ್ಥರು ಸೇರಿ ಜಮೀನಿಗೆ ತೆರಳಿದ್ದ ವೇಳೆ ಶಿವಲಿಂಗಯ್ಯ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಈ ಅವಘಡ ಸಂಭವಿಸಿದೆ. ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಮಕ್ಕಳು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಹೊಂಡಕ್ಕೆ ಬಿದ್ದ ಮೂರು ಮಕ್ಕಳನ್ನು ರಕ್ಷಿಸಿದ್ದು, ಆಸ್ಪತ್ರೆಗೆ ರಾವನಿಸಲಾಗಿದೆ.

ಚಿಕಿತ್ಸೆ ಫಲಕಾರಿಯಾಗದೇ ಓರ್ವ ಬಾಲಕಿ ಮೃತಪಟ್ಟಿದ್ದಾಳೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಹೊಸ ವರ್ಷ ಆಚರಣೆಗೆ ಶ್ರೀರಾಮಸೇನೆ ತ್ರೀವ ವಿರೋಧ!

Share This Article