ದಾವಣಗೆರೆ: ಚಾಕ್ಲೇಟ್ (chocolate) ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.
ಪೋಷಕರು ಬಾಲಕಿ (Girl) ಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಹೀಗಾಗಿ ಆಕೆ ಮನೆ ಮುಂದೆ ತನ್ನ ಪಾಡಿಗೆ ಆಟವಾಡುತ್ತಿದ್ದಳು. ಬಾಲಕಿ ಒಬ್ಬಳೇ ಆಟವಾಡುತ್ತಿರುವುದನ್ನು ಅದೇ ಗ್ರಾಮದ ನಾಗ ಎಂಬಾತ ಗಮನಿಸಿದ್ದಾನೆ.
ಅಲ್ಲದೆ ಆಟವಾಡುತ್ತಿದ್ದ ಬಾಲಕಿಯ ಬಳಿ ನಿನಗೆ ಚಾಕ್ಲೇಟ್ ಕೊಡಿಸುತ್ತೇನೆ ಎಂದು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ನಂತರ ಪುಟ್ಟ ಕಂದಮ್ಮನ ಮೇಲೆ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಉದ್ಯಮಿ ಕೊಲೆ ಪ್ರಕರಣ – 6 ದಿನಗಳ ಬಳಿಕ ಮೃತದೇಹ ಪತ್ತೆ
ಇತ್ತ ಪೋಷಕರು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಆದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಬಾಲಕಿಯ ತಂದೆ-ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಾಗಿ 24 ಗಂಟೆ ಒಳಗೆ ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಇತ್ತ ಸಂತ್ರಸ್ತ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k