ಬೆಂಗಳೂರು: ಅಪಾರ್ಟ್ಮೆಂಟ್‌ವೊಂದರ ಈಜುಕೊಳದಲ್ಲಿ (Swimming Pool) ಬಿದ್ದು 10 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣದಲ್ಲಿ 7 ಮಂದಿಯನ್ನು ವರ್ತೂರು ಪೊಲೀಸರು (Varthur Police) ಬಂಧಿಸಿದ್ದಾರೆ.
ಸರಿಸುಮಾರು ಒಂದೂವರೆ ತಿಂಗಳ ಬಳಿಕ ಆರೋಪಿಗಳನ್ನ (Accused) ಬಂಧಿಸಿದ್ದಾರೆ. ದೇಬಾಶೀಸ್ ಸಿನ್ಹಾ, ಜಾವೀದ್, ಸಂತೋಷ್ ಮಾಹಾರಾಣ, ಬಿಕಾಶ್ ಕುಮಾರ್, ಭಕ್ತ ಚರಣ್ ಪ್ರಧಾನ್, ಸುರೇಶ್, ಗೋವಿಂದ್ ಮಂಡಲ್ ಬಂಧಿತ ಆರೋಪಿಗಳು.
ಏನಿದು ಪ್ರಕರಣ?
ಕಳದೆ ಡಿಸೆಂಬರ್ 28ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ (White Field) ವರ್ತೂರಿನ ಪ್ರೆಸ್ಟೀಜ್ ಅಪಾರ್ಟ್ಮೆಂಟ್‌ನಲ್ಲಿ 10 ವರ್ಷದ ಬಾಲಕಿ ಈಜುಕೊಳದಲ್ಲಿ ಬಿದ್ದು ಸಾವನ್ನಪ್ಪಿದ್ದಳು. ಈಜುಕೊಳದಲ್ಲಿ ಬಿದ್ದ ವೇಳೆ ವಿದ್ಯುತ್ ಶಾಕ್ ಸಂಭವಿಸಿ ಮೃತಪಟ್ಟಿದ್ದಳು ಎಂದು ಹೇಳಲಾಗಿತ್ತು. ಘಟನೆ ಸಂಬಂಧ ಮೃತ ಬಾಲಕಿ ಮಾನ್ಯಾಳ ತಂದೆ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಗೃಹ ಸಚಿವ ಅಮಿತ್ ಶಾ ಭರವಸೆ
ಆರೋಪಿಗಳು ಸಿಕ್ಕಿಬಿದ್ದದ್ದು ಹೇಗೆ?
ಬಾಲಕಿ ತಂದೆ ದೂರಿನ ಅನ್ವಯ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿಯೂ ಸಾವಿಗೆ ನಿಖರ ಕಾರಣ ತಿಳಿದು ಬಂದಿರಲಿಲ್ಲ. ಆ ನಂತರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ವರದಿ ಹಸ್ತಾಂತರಿಸಲಾಗಿತ್ತು. ಎಫ್‌ಎಸ್‌ಎಲ್ ವರದಿಯಲ್ಲಿ ಬಾಲಕಿಗೆ ಕರೆಂಟ್ ಶಾಕ್ ತಗುಲಿರುವುದು ದೃಢಪಟ್ಟಿತ್ತು. ಇದನ್ನೂ ಓದಿ: ಮಾನವನ ದೇಹಕ್ಕೆ ಕೃತಕ ಉಸಿರಾಟ ಒದಗಿಸುವ ಕಬ್ಬಿಣದ ಶ್ವಾಸಕೋಶ – ಹೇಗೆ ಕೆಲಸ ಮಾಡುತ್ತೆ?
ಈ ಸಂಬಂಧ ಅಪಾರ್ಟ್ಮೆಂಟ್ ನಿರ್ವಹಣೆ ಮಾಡುತ್ತಿದ್ದವರನ್ನ ವಿಚಾರಣೆ ಮಾಡಿದಾಗ, ಸರಿಯಾಗಿ ನಿರ್ವಹಣೆ ಮಾಡದಿರುವುದೇ ಬಾಲಕಿ ಸಾವಿಗೆ ಕಾರಣ ಎಂಬುದು ಗೊತ್ತಾಯಿತು. ಹಾಗಾಗಿ ನಿರ್ವಹಣಾ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಾಲಕಿ ಮೃತಪಟ್ಟಿರುವ ಆರೋಪದ ಮೇಲೆ ವರ್ತೂರು ಪೊಲೀಸರು ಒಟ್ಟು 7 ಮಂದಿಯನ್ನ ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಒಂದೇ ಸಂವಿಧಾನ ಬೇಕೆಂಬ ಕನಸು ಸಾಕಾರಗೊಂಡಿದೆ – ಮೋದಿ ಬಣ್ಣನೆ