ಚಿಕ್ಕಬಳ್ಳಾಪುರ: ದೇವಸ್ಥಾನಕ್ಕೆ (Temple) ತೆರಳಿ ತಾಯಿಜೊತೆ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದ ಬಾಲಕಿಗೆ (Girl) ಬೈಕ್ (Bike) ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಪಂವಚಟಿ ಶಾಲೆ ಬಳಿ ಕಳೆದ ಶನಿವಾರ ಈ ಅಪಘಾತ (Accident) ನಡೆದಿದ್ದು, ಮುದ್ದೇನಹಳ್ಳಿ ಗ್ರಾಮದ ಕಾಂತರಾಜು ಮತ್ತು ಶ್ಯಾಮಲ ದಂಪತಿಯ ಮಗಳು ಜಾನುಶ್ರೀ (7) ಮೃತಪಟ್ಟಿದ್ದಾಳೆ. ಮುದ್ದೇನಹಳ್ಳಿಯ ಪಂಚವಟಿ ಶಾಲೆ ಬಳಿ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ತಾಯಿಯೊಂದಿಗೆ ದೇವಸ್ಥಾನಕ್ಕೆ ಹೋಗಿ ನಡೆದುಕೊಂಡು ಬರುವ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿ ಅವಘಡ- 20ಕ್ಕೂ ಹೆಚ್ಚು ಬಸ್‌ಗಳು ಸಂಪೂರ್ಣ ಭಸ್ಮ
ಹಿಂಬದಿಯಿಂದ ಅತಿವೇಗವಾಗಿ ಬಂದ ಬೈಕ್ ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಾನುಶ್ರೀಗೆ ಸತ್ಯಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಜಾನುಶ್ರೀ ಸಾವನ್ನಪ್ಪಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬೈಕ್ ಸವಾರನ ವಿರುದ್ಧ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶಾಲಾ ವಾಹನ, ಬಸ್ ನಡುವೆ ಭೀಕರ ಅಪಘಾತ- ಆರು ವಿದ್ಯಾರ್ಥಿಗಳ ದುರ್ಮರಣ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]