ನವದೆಹಲಿ: ಟೀಂ ಇಂಡಿಯಾ (Team India) ಮಾಜಿ ನಾಯಕ ಎಮ್.ಎಸ್ ಧೋನಿ (MS Dhoni) ತಮ್ಮ ಹುಟ್ಟುಹಬ್ಬವನ್ನು ತಾವು ಸಾಕಿರುವ ನಾಯಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.
ಶುಕ್ರವಾರ ತಮ್ಮ 42 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕೇಕ್ ಕಟ್ ಮಾಡುವಾಗ ಅವರ ಸುತ್ತ ಸಾಕುನಾಯಿಗಳು ಸುತ್ತುವರೆದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕ್ರಿಕೆಟ್‍ನಲ್ಲಿ (Cricket) ತಮ್ಮದೇ ಛಾಪು ಮೂಡಿಸಿ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ವಿಶ್ವದ ಮೂಲೆ ಮೂಲೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು. ಇದಕ್ಕೆ ಪ್ರತಿಯಾಗಿ ಶುಭಕೋರಿದ ಎಲ್ಲರಿಗೂ ಇನ್ಸ್ಟಾಗ್ರಾಮ್‍ನಲ್ಲಿ ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: USA ಮೇಜರ್ ಲೀಗ್ ಕ್ರಿಕೆಟ್‌ನಿಂದ ಹಿಂದೆ ಸರಿದ ಅಂಬಾಟಿ ರಾಯುಡು
Advertisement
View this post on Instagram
Advertisement
ಧೋನಿ ಆಗಸ್ಟ್ 2020 ರಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು. ಟೆಸ್ಟ್ ಕ್ರಿಕೆಟ್‍ನಲ್ಲಿ ಧೋನಿ 90 ಪಂದ್ಯಗಳನ್ನು ಆಡಿದ್ದಾರೆ. 38.09 ರ ಸರಾಸರಿಯಲ್ಲಿ 4,876 ರನ್ ಗಳಿಸಿದ್ದಾರೆ. ಆರು ಶತಕಗಳು ಮತ್ತು 33 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಟೆಸ್ಟ್‍ನಲ್ಲಿ ಅವರ ಅತ್ಯುತ್ತಮ ಸ್ಕೋರ್ 224 ಆಗಿದೆ.
Advertisement
Advertisement
350 ಏಕದಿನ ಪಂದ್ಯಗಳಲ್ಲಿ 10,773 ರನ್ ಹೊಡೆದಿರುವ ಧೋನಿ 10 ಶತಕಗಳು ಮತ್ತು 73 ಅರ್ಧಶತಕಗಳನ್ನು ಗಳಿಸಿದ್ದಾರೆ. ಇದರಲ್ಲಿ 183 ಅತ್ಯುತ್ತಮ ಸ್ಕೋರ್ ಆಗಿದೆ. ಏಕದಿನ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ದಾಖಲಿಸಿದ ಐದನೇ ಬ್ಯಾಟ್ಸ್‍ಮನ್ ಆಗಿದ್ದಾರೆ. ಸಚಿನ್ ತೆಂಡೂಲ್ಕರ್ 18,426 ರನ್ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: Asian Games 2023 ನಲ್ಲಿ ಟೀಂ ಇಂಡಿಯಾ ಪಾಲ್ಗೊಳ್ಳಲು ಬಿಸಿಸಿಐ ಗ್ರೀನ್ ಸಿಗ್ನಲ್
Web Stories