ಗದಗ: ಸರ್ಕಾರಿ ಬಸ್ ತಲೆ ಮೇಲೆ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ನರಗುಂದ (Naragunda) ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
ರಾಘವೇಂದ್ರ ಮನಿಕಟ್ಟಿ (20) ಮೃತ ವಿದ್ಯಾರ್ಥಿ. ಶಕ್ತಿಯೋಜನೆ ಪ್ರಭಾವದಿಂದ ಬಸ್ ಪೂರ್ತಿ ಪ್ರಯಾಣಿಕರು ತುಂಬಿದ್ದರು. ರಾಘವೇಂದ್ರ ಬಸ್ಸಿನ ಮುಂದಿನ ಬಾಗಿಲಲ್ಲಿ ನಿಂತಿದ್ದ. ಬಸ್ ಕೊಣ್ಣೂರ (Konnur) ನಿಲ್ದಾಣದಿಂದ ಹೊರಡುವ ವೇಳೆ ತಿರುವಿನಲ್ಲಿ ಆಯಾತಪ್ಪಿ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾನೆ. ಬಸ್ಸಿನ ಹಿಂದಿನ ಚಕ್ರಗಳಿಗೆ ವಿದ್ಯಾರ್ಥಿ ಸಿಲುಕಿದ್ದು, ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಲಾಬಿ ಎಟಿಎಂ ಮಷಿನ್‌ನಲ್ಲಿ ಹಣ ಹಾಕಲು ಬಂದು 39,500 ರೂ. ಕಳೆದುಕೊಂಡ ವ್ಯಕ್ತಿ
ಕೊಣ್ಣೂರ ನರಗುಂದ ಪಟ್ಟಣದ ಸರ್ಕಾರಿ ಸಿದ್ಧೇಶ್ವರ ಪದವಿ ಕಾಲೇಜಿನಲ್ಲಿ ರಾಘವೇಂದ್ರ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ. ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗದಿಂದ ಕೊಣ್ಣೂರ, ನರಗುಂದ, ಗದಗ ಮಾರ್ಗವಾಗಿ ಹೊಸಪೇಟೆಗೆ ಹೊರಟಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಅಭಿವೃದ್ಧಿಗೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್, ಮಿತ್ರಪಕ್ಷಗಳಿಂದ ಪಿಹೆಚ್‌ಡಿ: ಮೋದಿ ವಾಗ್ದಾಳಿ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ (Gadaga) ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Kalaburagi| ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ