ಕೊಪ್ಪಳ: ಜಿಲ್ಲೆಯ ಬಂಕಾಪುರ (Bankapura) ತೋಳಧಾಮದಲ್ಲಿ ತೋಳವೊಂದು ಐದು ಮರಿಗಳಿಗೆ ಜನ್ಮ ನೀಡಿದೆ. ಸಂರಕ್ಷಿತ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದುತೋಳದ (ಇಂಡಿಯನ್ ಗ್ರೇ ಉಲ್ಫ್) ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪುರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದೆ. ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ ಸಂತತಿಯಲ್ಲಿ ಹೆಚ್ಚಳಕ್ಕೂ ಇದೆ ಕಾರಣವಾಗಿದೆ ಎಂದರು.ಇದನ್ನೂ ಓದಿ: ಮೈಸೂರು ಉದಯಗಿರಿ ಗಲಭೆ ಕೇಸ್ – ಘಟನೆಯಲ್ಲಿ ಭಾಗಿಯಾದವರನ್ನ ಮುಲಾಜಿಲ್ಲದೇ ಬಂಧಿಸಿ: ಸಿಎಂ ಸೂಚನೆ
Advertisement
Advertisement
ಕಳೆದ ತಿಂಗಳು ಇದೇ ಕುರುಚಲು ಕಾಡಿನಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿತ್ತು. ಈಗ ಮತ್ತೊಂದು ತೋಳ ಐದು ಮರಿಗೆ ಜನ್ಮಕೊಟ್ಟಿದೆ. ನೈಸರ್ಗಿಕ ಗುಹೆಗಳು, ಬೆಟ್ಟ ಗುಡ್ಡಗಳನ್ನೂ ಹೊಂದಿರುವ ಈ ಧಾಮದಲ್ಲಿ, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿ ಮೊದಲಾದ ಹಲವು ವನ್ಯಜೀವಿಗಳಿವೆ. ಕಳ್ಳಬೇಟೆ ತಡೆಗೂ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಮಾಹಿತಿ ನೀಡಿದರು.
Advertisement
ಪ್ರಸ್ತುತ ಈ ಕಾಡಿನಲ್ಲಿ ಬೂದುತೋಳಗಳ ಸಂಖ್ಯೆ 40-45ಕ್ಕೆ ಹೆಚ್ಚಳವಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಗುಹೆಗಳ ಬಳಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಗರಿಷ್ಠ ಉಷ್ಣಾಂಶದ ದಾಖಲೆ ಬರೆದ ಬೆಂಗಳೂರು
Advertisement