ರಾಯಚೂರು: ಹಳೆಯ ವೈಷಮ್ಯ ಹಿನ್ನೆಲೆ ಕ್ಷುಲ್ಲಕ ಕಾರಣಕ್ಕೆ ಘರ್ಷಣೆ ನಡೆದಿದ್ದು, ಯುವಕನ ಕೊಲೆಯಲ್ಲಿ ಜಗಳ ಅಂತ್ಯವಾಗಿರುವ ಘಟನೆ ಜಿಲ್ಲೆಯ ಸಿರವಾರ (Sirwar) ತಾಲೂಕಿನ ಮಾಚನೂರು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಮಾಚನೂರು ಗ್ರಾಮದ ನಿವಾಸಿ ಸಮೀರ್ (29) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ನವವೃಂದಾವನ ಗಡ್ಡೆಯ ಪದ್ಮನಾಭ ತೀರ್ಥರ ಆರಾಧನೆ ರಾಯರಮಠಕ್ಕೆ – ಸುಪ್ರೀಂ
ಈ ಹಿಂದೆ ಮೊಹರಂ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯುವಕ ಸಮೀರನ ಎದೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಬಂಧನ