ಮಂಡ್ಯ: ವ್ಯಕ್ತಿಯೊಬ್ಬನ ಮೇಲೆ ಚಾಕುವಿನಿಂದ ಇರಿದಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಬೆಂಗಳೂರು ಮೂಲದ 38 ವರ್ಷದ ಲೋಕೇಶ್ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ. ಲೋಕೇಶ್ ಬೆಂಗಳೂರಿನಿಂದ ಸ್ನೇಹಿತರ ಜೊತೆ ನಾಗಮಂಗಲಕ್ಕೆ ಹೋಗುತ್ತಿದ್ದರು. ಈ ವೇಳೆ ಸ್ನೇಹಿತರ ನಡುವೆಯೇ ಗಲಾಟೆಯಾಗಿ ಎದೆಗೆ ಚಾಕು ಹಾಕಿದ್ದಾರೆ.
Advertisement
ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಲೋಕೇಶ್ ಅವರನ್ನು ಮಂಡ್ಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಣ ಹಂಚಿಕೆ ವಿಷಯವೇ ಗಲಾಟೆಗೆ ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಲೋಕೇಶ್ ಮತ್ತು ಜೊತೆಯಲ್ಲಿದ್ದ ಗೆಳೆಯರು ಈ ಹಿಂದೆ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ.
Advertisement
ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.