ಚೆನ್ನೈ: ಕಾವೇರಿ ನೀರಿಗಾಗಿ (Cauvery Water) ಕರ್ನಾಟಕ (Karnataka) ಮತ್ತು ತಮಿಳುನಾಡು (Tamilnadu) ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕರ್ನಾಟಕ ಸರ್ಕಾರದ ವಿರುದ್ಧ ಹಾಗೂ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಮಿಳುನಾಡು ರೈತರು ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
#WATCH | A group of Tamil Nadu farmers in Tiruchirappalli holding dead rats in their mouths protest against the Karnataka government and demand the release of Cauvery water to the state from Karnataka pic.twitter.com/CwQyVelyjF
— ANI (@ANI) September 26, 2023
ಸತ್ತ ಇಲಿಯನ್ನು ಬಾಯಲ್ಲಿಟ್ಟುಕೊಂಡು ರೈತರು ಈ ಪ್ರತಿಭಟನೆ ಮಾಡುತ್ತಿದ್ದಾರೆ. ಈಗಾಗಲೇ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಆದರೂ ಪಟ್ಟು ಬಿಡದ ತಮಿಳನ್ನರು ಮತ್ತೆ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದಾರೆ.
ಇತ್ತ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್‍ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್‍ಗೆ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ತೊಡಗಿವೆ. ನಮಗೇ ಕುಡಿಯಲು ನೀರಿಲ್ಲದಿದ್ದು, ತಮಿಳುನಾಡಿಗೆ ಯಾಕೆ ಹರಿಸುತ್ತೀರಿ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕುತ್ತಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]