ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಭಾರೀ ಅನಾಹುತವೊಂದು ತಪ್ಪಿದೆ.
ಹೌದು. ಲಾರಿ ಮೇಲೆ ಭಾರೀ ಗಾತ್ರದ ವಾಹನ ತಡೆಗಟ್ಟುವ ಕಬ್ಬಿಣದ ಸಲಾಕೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ನಗರದಲ್ಲಿ ಭಾರೀ ವಾಹನ ತಡೆಗೆ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಕಬ್ಬಿಣದ ಸಲಾಕೆಯ ತಡೆಗಳನ್ನು ನಿರ್ಮಿಸಲಾಗಿದೆ. ಅಂತದೇ ಒಂದು ಕಬ್ಬಿಣದ ಸಲಾಕೆ ಲಾರಿಯೊಂದರ ಮೇಲೆ ಮುರಿದು ಬಿದ್ದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಯುವತಿಯ ಬರ್ಬರ ಹತ್ಯೆ- 16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ!
ವಾಹನ ಚಲಿಸುತ್ತಿದ್ದ ವೇಳೆಯಲ್ಲಿಯೇ ಕಬ್ಬಿಣದ ಸಲಾಕೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಈ ಘಟನೆ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.