ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅಪಘಾತ

Public TV
1 Min Read
iran president Ebrahim Raisi

ತೆಹ್ರಾನ್: ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ ಇರಾನ್‌ (Iran) ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರನ್ನು ಸಾಗಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷರ ಕೆಲವು ಸಹಚರರು, ಕೇಂದ್ರ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಒಂದೇ ವಾರದಲ್ಲಿ 25,900 ಕೊರೊನಾ ಪ್ರಕರಣಗಳು ಪತ್ತೆ- ಸಿಂಗಾಪುರದಲ್ಲಿ ಮಾಸ್ಕ್‌ ಕಡ್ಡಾಯ

Iranian President Iranian Ebrahim Raisi

ಅಧ್ಯಕ್ಷರ ಬೆಂಗಾವಲು ಪಡೆ ಮೂರು ಹೆಲಿಕಾಪ್ಟರ್‌ಗಳನ್ನು ಒಳಗೊಂಡಿತ್ತು. ಈ ಪೈಕಿ ಎರಡು ಹೆಲಿಕಾಪ್ಟರ್‌ಗಳು ವಿವಿಧ ಸಚಿವರು ಮತ್ತು ಅಧಿಕಾರಿಗಳನ್ನು ಹೊತ್ತು ತಮ್ಮ ಗಮ್ಯಸ್ಥಾನವನ್ನು ಯಶಸ್ವಿಯಾಗಿ ತಲುಪಿವೆ. ಆದರೆ ಅಧ್ಯಕ್ಷ ರೈಸಿ ಅವರನ್ನು ಹೊತ್ತ ಹೆಲಿಕಾಪ್ಟರ್ ತೊಂದರೆ ಎದುರಿಸಿತು.

ಅಧ್ಯಕ್ಷ ರೈಸಿ ಅವರ ಜೊತೆ ವಿದೇಶಾಂಗ ಸಚಿವ ಹೊಸೈನ್ ಅಮಿರಬ್ದೊಲ್ಲಾಹಿಯಾನ್ ಕೂಡ ಇದ್ದರು ಎನ್ನಲಾಗಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಪ್ರಯಾಣಿಕರ ಸ್ಥಿತಿಯ ಕುರಿತು ಹೆಚ್ಚಿನ ವಿವರ ಇನ್ನೂ ಬಹಿರಂಗವಾಗಿಲ್ಲ. ಇದನ್ನೂ ಓದಿ: ಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕಿಸ್ತಾನ ವಿದ್ಯಾರ್ಥಿಗಳ ಟಾರ್ಗೆಟ್‌ ಮಾಡಿ ದಾಳಿ

Share This Article