ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಕಬೈಲ್‌ನಲ್ಲಿ ಮನೆಗಳಿಗೆ ಬೆಂಕಿ ತಗುಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ತಡರಾತ್ರಿ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಬಡಕಬೈಲ್ ಜಂಕ್ಷನ್‌ನ ಬಳಿಯ 3-4 ಮನೆಗಳಿಗೆ ಬೆಂಕಿ ತಗುಲಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿಂದ ರಾತ್ರಿಯಿಡೀ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ರಾತ್ರಿಯೇ ಆಗಮಿಸಿ ಮನೆ ಮಂದಿಗೆ ಸಾಂತ್ವನ ಹೇಳಿದರು. ಅಗ್ನಿ ಅವಘಡದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.