ನವದೆಹಲಿ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ಈ ಬಾರಿಯ ದೀಪಾವಳಿಗೆ (Deepavali) ಹೊಸ ದಾಖಲೆ ಸೃಷ್ಟಿಸಲು ತಯಾರಿ ನಡೆದಿದೆ. ಈ ಬಾರಿಯ ದೀಪಾವಳಿಗೆ 24 ಲಕ್ಷ ಹಣತೆಗಳನ್ನು ಹಚ್ಚಲು ಸರ್ಕಾರ ತಿರ್ಮಾನಿಸಿದ್ದು, ದೀಪೋತ್ಸವದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಒಟ್ಟು 51 ಘಾಟ್‌ಗಳಲ್ಲಿ 24 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಹಚ್ಚಲಾಗುತ್ತದೆ.
ಕಾರ್ಯಕ್ರಮಕ್ಕೂ ಮುನ್ನ ಇಂದು ಬೆಳಗ್ಗೆ ಸಂಭ್ರಮಾಚರಣೆಯಲ್ಲಿ ಶೋಭಾ ಯಾತ್ರೆಗೆ ಚಾಲನೆ ನೀಡಲಾಯಿತು. ರಾಮಾಯಣವನ್ನು ಆಧರಿಸಿದ ಹದಿನಾರು ಕೋಷ್ಟಕಗಳು ಯಾತ್ರೆಯಲ್ಲಿ ಭಾಗವಹಿಸಿದ್ದವು. ನಗರದಲ್ಲಿ ಶ್ರೀರಾಮನ ಜೀವನಗಾಥೆಯನ್ನು ಬಿಂಬಿಸುವ ಮರಳು ಕಲೆಯನ್ನೂ ಮಾಡಲಾಗಿದೆ. ಇದನ್ನೂ ಓದಿ: ಮತ್ತೆ ಚರ್ಚೆಯಲ್ಲಿ ಏಕರೂಪ ನಾಗರಿಕ ಸಂಹಿತೆ – ಉತ್ತರಾಖಂಡದಲ್ಲಿ ಮೊದಲು ಕಾನೂನು ಜಾರಿಗೆ ಸಿದ್ಧತೆ
Advertisement
2017ರಿಂದ ರಾಮಮಂದಿರ ಪ್ರದೇಶದಲ್ಲಿ ಉತ್ಸವವನ್ನು ಆಯೋಜಿಸಲಾಗುತ್ತಿದೆ ಮತ್ತು ಪ್ರತಿ ವರ್ಷ ಹೊಸ ದಾಖಲೆಯನ್ನು ಸೃಷ್ಟಿಸುತ್ತಿದೆ. ಈ ಬಾರಿಯ ದೀಪೋತ್ಸವದಲ್ಲಿ ಹೊಸ ದಾಖಲೆ ಸೃಷ್ಟಿಯಾಗಲಿದೆ. 50 ಕ್ಕೂ ಹೆಚ್ಚು ದೇಶಗಳ ರಾಯಭಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉತ್ತರ ಪ್ರದೇಶದ (Uttar Pradesh) ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಹೇಳಿದ್ದಾರೆ. ಇದನ್ನೂ ಓದಿ: ತಿಹಾರ್ ಜೈಲಿನಿಂದ ಬಂದು ಅನಾರೋಗ್ಯ ಪೀಡಿತ ಪತ್ನಿ ಭೇಟಿಯಾದ ಮನೀಶ್ ಸಿಸೋಡಿಯಾ
Advertisement
Advertisement
2017ರಲ್ಲಿ 51,000 ಹಣತೆಗಳನ್ನು ಹಚ್ಚಲಾಗಿತ್ತು. 2019ರಲ್ಲಿ 4.10 ಲಕ್ಷ ಹಣತೆಗಳನ್ನು ಬೆಳಗಿದ್ದು, 2020ರಲ್ಲಿ 6 ಲಕ್ಷಕ್ಕೂ ಹೆಚ್ಚು, 2021ರಲ್ಲಿ 9 ಲಕ್ಷಕ್ಕೂ ಅಧಿಕ, 2022ರಲ್ಲಿ ಸುಮಾರು 15 ಲಕ್ಷ ದೀಪಗಳನ್ನು ಹಚ್ಚಲಾಗಿತ್ತು. ಇದು ವಿಶ್ವ ದಾಖಲೆಗೆ ಸಾಕ್ಷಿಯಾಗಿತ್ತು. ಈ ವರ್ಷ 2023ರಲ್ಲಿ 24 ಲಕ್ಷ ದೀಪ ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ (Guinness Record) ಬರೆಯಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ಭಯೋತ್ಪಾದಕರಿಗೆ 85 ಕೋಟಿ ರೂ. ಫಂಡಿಂಗ್ – ಪ್ರಕರಣಕ್ಕೆ ದುಬೈ ಲಿಂಕ್
Advertisement
ಆಚರಣೆಯ ಸಮಯದಲ್ಲಿ ಸೂಕ್ತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಅಯೋಧ್ಯೆಯನ್ನು 14 ಪೊಲೀಸ್ ವಲಯಗಳಾಗಿ ವಿಂಗಡಿಸಿದ್ದೇವೆ ಎಂದು ಅಯೋಧ್ಯೆ ರೇಂಜ್ ಐಜಿ ಪ್ರವೀಣ್ ಕುಮಾರ್ ಹೇಳಿದರು. ಭದ್ರತಾ ಸಿದ್ಧತೆಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಹ ಬಳಸಲಾಗಿದೆ. ರಾಮ್ ಕಿ ಪೈಡಿಯಲ್ಲಿರುವ ವಿವಿಐಪಿ ಆವರಣವನ್ನು ಶ್ವಾನದಳದೊಂದಿಗೆ ಪರಿಶೀಲಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ- 6 ಗ್ಯಾರಂಟಿ ಘೋಷಿಸಿದ ತೆಲಂಗಾಣ ಕಾಂಗ್ರೆಸ್
ಸರಯೂ ನದಿಯ ದಡದಲ್ಲಿರುವ ರಾಮ್ ಕಿ ಪೈಡಿಯಲ್ಲಿ 24 ಲಕ್ಷ ದೀಪಗಳನ್ನು ಬೆಳಗಿಸಲಾಗುತ್ತದೆ. 20 ಕೋಟಿ ರೂ.ಗಳ ಬೃಹತ್ ಬಜೆಟ್‌ನಲ್ಲಿ ಜಿಲ್ಲಾಡಳಿತ ಬೆಳಕು-ಧ್ವನಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿದ್ದು, ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುವ ನಿರೀಕ್ಷೆ ಇದೆ. ರಾಮ್ ಕಿ ಪೈಡಿಯಲ್ಲಿ ಬೆಳಗುವ ಒಂದು ದೀಪಕ್ಕೆ 51 ರೂ. ಮತ್ತು 51 ದೀಪಗಳಿಗೆ 1,100 ರೂ.ಗಳನ್ನು ನೀಡುವ ಮೂಲಕ ಈವೆಂಟ್‌ನಲ್ಲಿ ಭಾಗಿಯಾಗಲು ಸಾಮಾನ್ಯ ಜನರಿಗೆ ಸರ್ಕಾರ ಅವಕಾಶ ನೀಡಿದೆ. ಇದನ್ನೂ ಓದಿ: ಕೂಡಿ ಬಾಳುವ ಸಂಸ್ಕೃತಿ ನಮಗೆ ಬಂದಿದ್ದೇ ಹಿಂದೂ ಧರ್ಮದಿಂದ: ಜಾವೇದ್ ಅಖ್ತರ್