ಬೆಂಗಳೂರು: ನಡುರಸ್ತೆಯಲ್ಲಿ ಬೃಹತ್ ಗಾತ್ರದ ಕ್ರೇನ್ (Crane) ಒಂದು ಹೊತ್ತಿ ಉರಿದಿರುವ ಘಟನೆ ನಗರದ ಯಲಚೇನಹಳ್ಳಿ (Yelachenahalli) ಮೆಟ್ರೋ ಸ್ಟೇಷನ್ ಬಳಿ ರಾತ್ರಿ ನಡೆದಿದೆ.
ರಸ್ತೆ ನಡುವೆಯೇ ಕ್ರೇನ್‌ಗೆ ಬೆಂಕಿ (Fire) ತಗುಲಿ ಹೊತ್ತಿ ಉರಿದಿದೆ. ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
Advertisement
Advertisement
ವರ್ತೂರಿನಿಂದ ಬಿಡದಿಗೆ ತೆರಳುತ್ತಿದ್ದ ಕ್ರೇನ್ ಇದಾಗಿದ್ದು, ಆರಂಭದಲ್ಲಿ ಕ್ರೇನ್‌ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಕ್ರೇನ್ ಅನ್ನು ರಸ್ತೆ ಪಕ್ಕ ನಿಲ್ಲಿಸಿದ್ದಾನೆ. ಬೆಂಕಿ ಜಾಸ್ತಿಯಾಗುತ್ತಿದ್ದಂತೆ ಕ್ರೇನ್‌ನಲ್ಲಿದ್ದ ಮೂವರು ಕೆಳಗೆ ಇಳಿದಿದ್ದಾರೆ. ತಕ್ಷಣ ವಾಹನ ಸಂಚಾರವನ್ನೂ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: Breaking – ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ
Advertisement
ಕೇನ್‌ನ ಮುಂಭಾಗದಲ್ಲಿರುವ ಆಯಿಲ್ ಮತ್ತು ವೈರ್‌ನಿಂದ ಬೆಂಕಿಯ ಪ್ರಮಾಣ ಹೆಚ್ಚಾಗಿದೆ. ತಕ್ಷಣ ಸ್ಥಳೀಯರು, ಪೊಲೀಸರಿಂದ ಅಗ್ನಿಶಾಮಕ ದಳಕ್ಕೆ ಮಾಹಿತಿ ದೊರೆತಿದೆ. ತಕ್ಷಣ ಸ್ಥಳಕ್ಕೆ ಬಂದ 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ.
Advertisement
ಬೆಂಕಿ ಹೊತ್ತಿಕೊಂಡ ಸ್ಥಳದ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಕೂಡಾ ಇತ್ತು. ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ – ವರ್ತಕರು, ಬಿಜೆಪಿ ಮುಖಂಡರು ವಿರೋಧ
Web Stories