ಮೈಸೂರು:ಮಾಜಿ ಮುಡಾ ಆಯುಕ್ತನಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ (Haveri University) ಕುಲಸಚಿವರಾಗಿ (Registrar) ವರ್ಗಾವಣೆ (Transfer) ಮಾಡಲಾಗಿದೆ.ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಮೈ-ಕೈ ಸುಟ್ಟ ಪಾಪಿ ಪತಿ
Advertisement
50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ (G T Dinesh Kumar) ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಆರೋಪ ಕೇಳಿ ಬಂದ ತಕ್ಷಣ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ (Bhairati Suresh) ಮೈಸೂರಿಗೆ ಅಗಮಿಸಿ ಬಳಿಕ ಸಭೆ ನಡೆಸಿದ್ದರು. ಯಾವುದೇ ಸ್ಥಳ ತೋರಿಸದೇ ಮುಡಾ ಆಯುಕ್ತರಾಗಿದ್ದ ಅವರನ್ನು ವರ್ಗಾವಣೆ ಮಾಡಲಾಗಿತ್ತು.
Advertisement
Advertisement
2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ಈಗ ಹಾವೇರಿ ವಿವಿಯ ಕುಲಸಚಿವರಾಗಿ ವರ್ಗಾವಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ- ಈ ಬಾರಿಯೂ ಕೋಟಿ ಒಡೆಯ ಮಾದಪ್ಪ