ಚಿಕ್ಕೋಡಿ: ತಾಲೂಕಿನ (Chikkodi) ವಿವಿಧೆಡೆ ಬಿರುಗಾಳಿ ಸಹಿತ ಭಾರೀ (Rain) ಮಳೆಯಾಗಿದೆ. ಬಿರುಗಾಳಿಯ ಅಬ್ಬರಕ್ಕೆ ಚಿಕ್ಕೋಡಿ – ಹುಕ್ಕೇರಿ ರಸ್ತೆಯ ಸಂಕೇಶ್ವರ ಕ್ರಾಸ್ ಬಳಿ ರಸ್ತೆ ಮೇಲೆ ಬೃಹದಾಕಾರದ ಮರ ನೆಲಕ್ಕರುಳಿದೆ.
ಸ್ಥಳಕ್ಕೆ ಚಿಕ್ಕೋಡಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ಮರವನ್ನು ತೆಗೆಯುವ ಕಾರ್ಯ ಮಾಡಿದ್ದಾರೆ. ಸುಮಾರು 2 ಗಂಟೆಗಳ ಬಳಿಕ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.
ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದಿನ 3 ಗಂಟೆ ಭಾರೀ ಮಳೆ ಎಚ್ಚರಿಕೆ – 2 ದಿನ ಯೆಲ್ಲೋ ಅಲರ್ಟ್
ರಾಜ್ಯದ ಕೆಲವು ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಇಂದು ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಮಳೆಯಾಗಿದೆ.

