ಬೆಂಗಳೂರು: ನಗರದಲ್ಲಿ (Bengaluru) ಸುರಿದ ಭಾರೀ ಮಳೆಗೆ (Rain) ರಾಜಭವನದ ಬಳಿ ಬೃಹತ್ ಮರವೊಂದು ಧರೆಗುರುಳಿದೆ.
ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬುಡ ಸಮೇತ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ಪೊಲೀಸ್ ತಿಮ್ಮಯ್ಯ ಸರ್ಕಲ್ ಕಡೆಯಿಂದ ಚಾಲುಕ್ಯ ರಸ್ತೆ ಬಂದ್ ಆಗಿದೆ. ಬಿಬಿಎಂಪಿ ಸಿಬ್ಬಂದಿ ಮರ ತೆರವು ಕಾರ್ಯ ಮಾಡುತ್ತಿದ್ದಾರೆ. ಇದನ್ನೂ ಓದಿ: ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿಗೆ ಮಳೆ ಅಲರ್ಟ್
ಇಂದು (ಸೆ.4) ಸಹ ನಗರದಲ್ಲಿ ಮುಂಜಾನೆಯೇ ಮೋಡ ಕವಿದ ವಾತಾವರಣವಿದ್ದು, ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿನಲ್ಲಿ (Bengaluru) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ವಿಧಾನಸೌಧ, ಚಾಲುಕ್ಯ ಸರ್ಕಲ್, ಕೆ ಆರ್ ಸರ್ಕಲ್, ಕಾರ್ಪೋರೇಷನ್ ಸರ್ಕಲ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಗೈಡ್‌ಲೈನ್ಸ್ ಜಾರಿ – ಮಾರ್ಗಸೂಚಿ ಏನು?

