ಚಿಕ್ಕಮಗಳೂರು: ಕಾಫಿನಾಡಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಪರಿಸ್ಥಿತಿ ಗಂಭೀರ ಮಟ್ಟಕ್ಕೆ ತಲುಪುತ್ತಿದೆ. ಭಾನುವಾರ ಚಾರ್ಮಾಡಿ ಘಾಟ್‌ನಲ್ಲಿ ಬೃಹತ್ ಮರ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಇಂದು ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಘಾಟ್‌ನ 8ನೇ ತಿರುವಿನಲ್ಲಿ ಮರ ಬಿದ್ದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಸುಮಾರು 1 ಕಿ.ಮೀ ಗೂ ಹೆಚ್ಚು ದೂರದವರೆಗೆ ಟ್ರಾಫಿಕ್ ಜಾಮ್ ಆಗಿದೆ.
Advertisement
Advertisement
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮದ ರಸ್ತೆ ಮೇಲೆ ಗುಡ್ಡ ಕುಸಿದಿದೆ. ರಸ್ತೆ ಮೇಲೆ ಮಣ್ಣು ಕುಸಿದಿರುವ ಪರಿಣಾಮ ಹೊರನಾಡು-ಶೃಂಗೇರಿ ಮಾರ್ಗದ ಸಂಚಾರ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಸ್ಥಳದಲ್ಲೇ ಇರುವ 4-5 ಮನೆಗಳ ಮೇಲೂ ಗುಡ್ಡ ಕುಸಿಯುವ ಸಾಧ್ಯತೆಯಿದ್ದು, ಗ್ರಾಮದ ಕೂಲಿ ಕಾರ್ಮಿಕರು ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಮೈದುಂಬಿ ಧುಮ್ಮುಕ್ಕುತ್ತಿರುವ ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ
Advertisement
Advertisement
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆಯ ಹಿನ್ನೆಲೆ ಮರ, ಮಣ್ಣು, ಬಂಡೆಗಳು ರಸ್ತೆಗೆ ಉರುಳುತ್ತಿವೆ. ಕೊಳಗಾಮೆ-ಮುತ್ತೋಡಿ ಸಂಪರ್ಕ ಕಲ್ಪಿಸುವ ಗಿರಿ ಭಾಗದ ರಸ್ತೆಯಲ್ಲಿ ಭೂ ಕುಸಿತವಾಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದನ್ನೂ ಓದಿ: ಕಾಣಿಯೂರಿನಲ್ಲಿ ಹೊಳೆಗೆ ಬಿದ್ದ ಕಾರು- ನೀರಿನಲ್ಲಿ ಕೊಚ್ಚಿಕೊಂಡು ಹೋಗಿರೋ ಶಂಕೆ
ಇನಾಂ ದತ್ತಾತ್ರೇಯ ಪೀಠಕ್ಕೆ ಹೋಗುವ ರಸ್ತೆಯಲ್ಲೂ ಮುಕ್ಕಾಲು ಭಾಗಕ್ಕೆ ಗುಡ್ಡ ಕುಸಿತವಾಗಿದೆ. ದತ್ತಪೀಠಕ್ಕೆ ಹೋಗುವ ಸರ್ಪಹಾದಿಯಲ್ಲಿ ಕುಸಿತ ಉಂಟಾಗಿದ್ದು ಈ ಹಿನ್ನೆಲೆ ಕಾರು, ಬೈಕ್ ಹೊರತುಪಡಿಸಿ ಭಾರೀ ವಾಹನಗಳ ಸಂಚಾರ ಬಂದ್ ಆಗಿದೆ. ಗಿರಿ ಶ್ರೇಣಿಯಲ್ಲಿ ಇನ್ನಷ್ಟು ಕುಸಿಯುವ ಆತಂಕ ಸೃಷ್ಟಿಯಾಗಿದೆ.