Connect with us

Districts

ಪತಿ, ಕುಟುಂಬದ ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿ ಆತ್ಮಹತ್ಯೆಗೆ ಯತ್ನ

Published

on

ಕೊಪ್ಪಳ: ಪತಿ, ಅತ್ತೆ, ಮಾವ, ನಾದನಿ ವರದಕ್ಷಿಣೆ ಕಿರುಕುಳವನ್ನು ತಾಳಲಾರದೇ ಮನನೊಂದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಗಂಗಾವತಿ ನಗರದಲ್ಲಿ ಈ ಘಟನೆ ನಡೆದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಹನಾಬೇಗಂ ಆತ್ಮಹತ್ಯೆಗೆ ಯತ್ನಿಸಿರೋ ಗೃಹಿಣಿಯಾಗಿದ್ದು, ಪತಿ ಮಿರ್ಜಾ ಅಹಮದ್ ಅಲಿ ಹಾಗೂ ಅತ್ತೆ, ಮಾವ, ನಾದನಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಎಂಟು ತಿಂಗಳ ಹೆಣ್ಣು ಮಗುವಿದ್ದು, ಹೆಣ್ಣು ಮಗು ಹುಟ್ಟಿದ್ದಕ್ಕೂ ಕೂಡಾ ಕಿರುಕುಳ ನೀಡಿದ್ದಾರೆ. ಪತಿ ಇನ್ನೊಂದು ಮದುವೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ ಎಂದು ಶಹನಾಬೇಗಂ ಅಣ್ಣ ಸೈಯ್ಯದ್ ಅಬುದರ್ ಪಾಷಾ ಹೇಳಿಕೆ ನೀಡಿದ್ದಾರೆ.

ಗಂಗಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗೃಹಿಣಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Click to comment

Leave a Reply

Your email address will not be published. Required fields are marked *