ಶ್ರೀನಗರ: ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರ ಗುಂಡು ಮತ್ತೆ ಸದ್ದು ಮಾಡಿದ್ದು, ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸಾವನ್ನಪ್ಪಿದ್ದು, ಮತ್ತೋರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ. ಶೋಪಿಯಾನ್‍ನ ಚೋಟಿಪೋರಾ ಪ್ರದೇಶದಲ್ಲಿದ್ದ ಆಪಲ್ ಆರ್ಕಿಡ್‍ನಲ್ಲಿ ಭಯೋತ್ಪಾದಕರು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿ ಈ ಹತ್ಯೆ ಮಾಡಿದ್ದಾರೆ.
45 ವರ್ಷದ ಕಾಶ್ಮೀರ ಪಂಡಿತ ಸುನೀಲ್ ಭಟ್ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದು, ಭಟ್ ಸಹೋದರನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಪ್ರದೇಶವನ್ನು ಜಮ್ಮು-ಕಾಶ್ಮೀರ ಪೊಲೀಸರು ಸುತ್ತುವರಿದಿದ್ದು ಭಯೋತ್ಪಾದಕರ ಹುಡುಕಾಟ ಆರಂಭವಾಗಿದೆ.
Advertisement
Jammu & Kashmir | One person killed in firing by terrorists on civilians in an apple orchard in Chotipora area of Shopian. The victim's family mourns his death.
A person was also injured in the incident. As per police, both the deceased &injured belong to the minority community. pic.twitter.com/BhaaEXBTya
— ANI (@ANI) August 16, 2022
Advertisement
ಕಳೆದ ಕೆಲವು ತಿಂಗಳುಗಳಿಂದ ಕಣಿವೆಯಲ್ಲಿ ಕಾಶ್ಮೀರಿ ಪಂಡಿತರು ಮತ್ತು ಇತರ ನಾಗರಿಕರನ್ನು ಗುರಿಯಾಗಿಸಿಕೊಂಡ ಉದ್ದೇಶಿತ ಹತ್ಯೆಗಳ ನಡೆಯುತ್ತಿವೆ ಎನ್ನುವ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆಯೇ ಹೊಸ ದಾಳಿ ನಡೆದಿದ್ದು, ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನದಿ ಕಣಿವೆಗೆ ಉರುಳಿದ ಬಸ್- 6 ಮಂದಿ ಯೋಧರು ಹುತಾತ್ಮ
Advertisement
Advertisement
ಮೇ 31 ರಂದು ಜಮ್ಮುವಿನ ಸಾಂಬಾ ಜಿಲ್ಲೆಗೆ ಸೇರಿದ ಶಾಲಾ ಶಿಕ್ಷಕಿ ರಜನಿ ಬಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಕಾಶ್ಮೀರಿ ಪಂಡಿತರಲ್ಲಿ ದೊಡ್ಡ ಕೋಲಾಹಲಕ್ಕೆ ಕಾರಣವಾಯಿತು. ಅವರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸದಿದ್ದರೆ ಕಣಿವೆಯಿಂದ ಸಾಮೂಹಿಕ ವಲಸೆಯನ್ನು ಕೈಗೊಳ್ಳುವುದಾಗಿ ಬೆದರಿಕೆ ಹಾಕಿದರು.
#Terrorists fired upon civilians in an apple orchard in Chotipora area of #Shopian. One person died and one injured. Both belong to minority community. Injured person has been shifted to hospital. Area #cordoned off. Further details shall follow.@JmuKmrPolice
— Kashmir Zone Police (@KashmirPolice) August 16, 2022
ಶಾಲೆಯಲ್ಲಿ ನಡೆದ ದಾಳಿಗೆ ಕೇವಲ ಎರಡು ವಾರಗಳ ಮೊದಲು ಅಂದರೆ ಮೇ 12 ರಂದು ಕಾಶ್ಮೀರದ ಚದೂರ ಪಟ್ಟಣದ ಸರ್ಕಾರಿ ಕಚೇರಿಗೆ ಬಂದೂಕುಧಾರಿಯೊಬ್ಬ ನುಗ್ಗಿ ಕಾಶ್ಮೀರಿ ಹಿಂದೂ ಉದ್ಯೋಗಿ ರಾಹುಲ್ ಭಟ್ ಮೇಲೆ ಗುಂಡು ಹಾರಿಸಿದನು. ರಾಹುಲ್ ಭಟ್‍ನನ್ನು ಕೊಂದ ಲತೀಫ್ ರಾಥರ್ ಸೇರಿದಂತೆ ಮೂವರು ಆರೋಪಿಗಳು ಲಷ್ಕರ್-ಎ-ತೊಯ್ಬಾ ಸಂಘಟನೆಗೆ ಸೇರಿದ್ದರು. ಈ ತಿಂಗಳ ಆರಂಭದಲ್ಲಿ ಬುದ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಇವರನ್ನು ಹೊಡೆದುರುಳಿಸಲಾಗಿತ್ತು.