ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ.
ಪಡಗೂರು, ಪರಮಾಪುರ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಅರಣ್ಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ರೈತರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು.
ಜಾನುವಾರು, ಮೇಕೆಗಳ ಮೇಲೆ ಚಿರತೆ ದಾಳಿ ಮಾಡುತ್ತಿತ್ತು. ಚಿರತೆ ಸೆರೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಗುಂಡ್ಲುಪೇಟೆ ಭಾಗದಲ್ಲಿ ಒಂದು ತಿಂಗಳಿಂದ 6 ಚಿರತೆಗಳು ಸೆರೆಯಾಗಿವೆ.