ಕೋಲಾರ: ತಾಲೂಕಿನ ಅರಾಭಿಕೊತ್ತನೂರು ಗ್ರಾಮದ ಬೆಟ್ಟದ ತಪ್ಪಲಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ.
ಕಳೆದ ಮೂರ್ನಾಲ್ಕು ತಿಂಗಳಿಂದ ಗ್ರಾಮದ ಸುತ್ತಮುತ್ತಲಿನ ಜನರ ನಿದ್ದೆಗೆಡಿಸಿದ್ದ ಈ ಚಿರತೆ ಇದೀಗ ಬೋನಿಗೆ ಬಿದ್ದಿದೆ. ಸದ್ಯ ಚಿರತೆಯನ್ನ ನೋಡಲೆಂದು ಕುತೂಹಲದಿಂದ ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.
Advertisement
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಚಿರತೆಯನ್ನ ಸಾಗಿಸಲು ಚಿಂತನೆ ನಡೆಸಿದ್ದಾರೆ. ಈ ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
Advertisement
Advertisement