ಗದಗ: ಮುಖಂಡನೊಬ್ಬ ರೋಣ ಪುರಸಭೆ ಮುಖ್ಯಾಧಿಕಾರಿಯನ್ನು ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾನೆ.
ಶರಣಪ್ಪ ಪೂಜಾರ್ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ ಪ.ಜಾತಿ-ಪ.ಪಂಗಡ ಮುಖಂಡ. ಪೌರಕಾರ್ಮಿಕ ವೇತನ ಪಾವತಿ ವಿಳಂಬ ಪ್ರಶ್ನಿಸಿ, ಪುರಭೆಯ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರ ಕಚೇರಿಯಲ್ಲಿ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಗೆ ಬಂದ ಅಧಿಕಾರಿಯೊಬ್ಬರು ಹಲ್ಲೆ ತಡೆದಿದ್ದಾರೆ.
Advertisement
ಘಟನೆಯ ವಿವರ:
ಬಾಕಿ ಇರುವ ವೇತನ ನೀಡುವಂತೆ ಒತ್ತಾಯಿಸಿ ರೋಣ ಪುರಸಭೆಯ ಪೌರಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಲ್ಲಿಗೆ ಬಂದ ಕೆಲವು ಮುಖಂಡರು ಲಕ್ಷ್ಮಣ ಕಟ್ಟಿಮನಿ ಅವರ ಕಚೇರಿಗೆ ಹೋಗಿದ್ದಾರೆ. ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರ ಜೊತೆಗೆ ಶರಣಪ್ಪ ಪೂಜಾರ್ ವಾಗ್ದಾಳಿಗೆ ಇಳಿದಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸಿ, ವೇತನವಿಲ್ಲದೆ ಅನೇಕ ಸಮಸ್ಯೆಗಳನ್ನು ಪೌರಕಾರ್ಮಿಕರು ಎದುರಿಸಿದ್ದಾರೆ. ಇದೇ ಪರಿಸ್ಥಿತಿ ನಿಮ್ಮ ಮನೆಯಲ್ಲಿ ನಿರ್ಮಾಣವಾಗಿ ಯಾರಾದರೂ ಮೃತಪಟ್ಟರೆ ನಡೆಯುತ್ತಾ? ವೇತನ ವಿಳಂಭವಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ಸ್ವಲ್ಪ ವಿಳಂಬವಾಗಿದ್ದು, ಕೆಲವೇ ದಿನಗಳಲ್ಲಿ ವೇತನ ಪಾವತಿ ಮಾಡಲಾಗುತ್ತದೆ ಎಂದು ಲಕ್ಷ್ಮಣ ಕಟ್ಟಿಮನಿ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಅಸಮಾಧಾನ ಹೊರಹಾಕಿದ ಶರಣಪ್ಪ, ಟೇಬಲ್ ಮೇಲಿದ್ದ ಗ್ಲೋಬ್ ಎತ್ತಿಕೊಂಡು ಹಲ್ಲೆಗೆ ಯತ್ನಿಸಿದ್ದಾನೆ. ಆತನ ಹಿಂದೆ ನಿಂತಿದ್ದ ವ್ಯಕ್ತಿಯೊಬ್ಬರು ತಕ್ಷಣವೇ ಹಲ್ಲೆಯನ್ನು ತಪ್ಪಿಸಿದ್ದಾರೆ. ಬಳಿಕ ಪುರಸಭೆ ಅಧಿಕಾರಿಯೊಬ್ಬರು ಮಧ್ಯ ಪ್ರವೇಶಿಸಿ, ಮುಖಂಡರನ್ನು ಹಾಗೂ ಪೌರಕಾರ್ಮಿಕರನ್ನು ಮುಖ್ಯಾಧಿಕಾರಿಗಳ ಕಚೇರಿಯಿಂದ ಹೊರಗೆ ಕಳುಹಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews