ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರ ಸ್ನೇಹಿತರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಲಿಕ್ಯಾ ಕ್ರಾಸ್ ಬಳಿ ನಡೆದಿದೆ. ಇದನ್ನೂ ಓದಿ: ಪಂದ್ಯಕ್ಕೆ ಮಳೆ ಅಡ್ಡಿ| ಆಸ್ಟ್ರೇಲಿಯಾ ಸೆಮಿಗೆ ಹೋದ್ರೂ ಅಫ್ಘಾನ್‌ಗೆ ಇನ್ನೂ ಇದೆ ಚಾನ್ಸ್!
ಕಡೂರು ತಾಲೂಕಿನ ಬೀರೂರಿನ ಹರೀಶ್ ಅವರಿಗೆ ಸೇರಿದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಗೆ ಆಗಮಿಸಿದ್ದ ವಿಜಯೇಂದ ಅವರನನ್ನು ಮಾತನಾಡಿಸಲು ಸ್ನೇಹಿತ ಹರೀಶ್ ಬಂದಿದ್ದರು. ಮಾತನಾಡಿಸಿ ವಾಪಸ್ ಬೀರೂರಿಗೆ ವಿಜಯೇಂದ್ರ ಕಾರಿನ ಹಿಂದೆ ಹೋಗುವಾಗ ಅಪಘಾತ ಸಂಭವಿಸಿದೆ.
Advertisement
ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಯುರೋಪಿಯನ್ ಒಕ್ಕೂಟದ ಉನ್ನತ ನಿಯೋಗದ ಜೊತೆ ಹೆಚ್‌ಡಿಕೆ ಮಹತ್ವದ ಮಾತುಕತೆ- ಏನೇನು ಹೂಡಿಕೆ ಚರ್ಚೆಯಾಗಿದೆ?