ಅಮರಾವತಿ: ರಸ್ತೆಯಲ್ಲಿದ್ದ ಗುಂಡಿ (Pothole) ತಪ್ಪಿಸಲು ಹೋಗಿ ಲಾರಿಯೊಂದು (Lorry) ಕಾಲುವೆಗೆ (Canal) ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಗೋಡಂಬಿ ಹಾಗೂ ಎಂಟು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಲಾರಿ ದೇವರಪಲ್ಲಿ (Devarapalli) ಗ್ರಾಮದ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಾರಿಯ ಮೇಲೆ ಕುಳಿತಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಮಂದಿಯ ಪೈಕಿ ಓರ್ವ ಮಾತ್ರ ಬದುಕುಳಿದಿದ್ದು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಾಗಿದೆ. ಇದನ್ನೂ ಓದಿ: ರಾಹುಲ್ ಹೇಳಿಕೆಯಿಂದ ಕಾಂಗ್ರೆಸ್ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ: ಅಮಿತ್ ಶಾ
ಗುಂಡಿ ತಪ್ಪಿಸಲು ಯತ್ನಿಸಿದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಾಲುವೆಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಶವಗಳನ್ನು ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಿ ದೇವಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್