ಭೋಪಾಲ್: 8 ವರ್ಷದ ಮಗಳ ಎದುರೇ ಮಹಿಳೆಯನ್ನು ಆಕೆಯ ಪ್ರಿಯಕರ ಚಾಕುವಿನಿಂದ ಇರಿದು ಕೊಂದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ. ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತನಿಖೆ ನಡೆಯುತ್ತಿದೆ.
ಮೃತಳನ್ನು ಸಂಗೀತ ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಸುಮಾರು 8 ಗಂಟೆ ಸುಮಾರಿಗೆ ಇಂದೋರ್‍ನ ಭನ್ವಾರ್ಕುವಾನ್ ಪ್ರದೇಶದಲ್ಲಿ 27 ವರ್ಷದ ಮಹಿಳೆಯನ್ನು ಆಕೆಯ 8 ವರ್ಷದ ಮಗಳ ಎದುರೇ ಹತ್ಯೆಗೈದ ಭೀಕರ ಘಟನೆ ಪಾಲ್ಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂಗೀತಾ ಭಾನುವಾರ ಸಂಜೆ ಮಗಳೊಂದಿಗೆ ತರಕಾರಿ ಖರೀದಿಸಲು ಮಾರುಕಟ್ಟೆಗೆ ಹೋಗಿದ್ದರು. ಹಿಂದಿರುಗುವಾಗ ಆಕೆಯ ಪ್ರೇಮಿ ವಿನೋದ್ ಆಕೆಯೊಂದಿಗೆ ಮಾತನಾಡುವ ನೆಪದಲ್ಲಿ ಅಡ್ಡಗಟ್ಟಿದ್ದ. ಈ ಸಂದರ್ಭದಲ್ಲಿ ಸಂಗೀತಾಳನ್ನು ವಿನೋದ್ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಸ್ಥಳೀಯಾಡಳಿತಗಳ ಚುನಾವಣೆ ಯಶಸ್ವಿ – ಡಿ.30ಕ್ಕೆ ಫಲಿತಾಂಶ
ರಸ್ತೆಯಲ್ಲಿ ಮಾತನಾಡುತ್ತಿದ್ದ ಸಂಗೀತಾ ಹಾಗೂ ವಿನೋದ್ ನಡುವೆ ಜಗಳ ಪ್ರಾರಂಭವಾಗಿ, ಕುಪಿತಗೊಂಡ ವಿನೋದ್ ತನ್ನ ಜೇಬಿನಲ್ಲಿದ್ದ ಚಾಕುವನ್ನು ತೆಗೆದು ಆಕೆಯ ಮೂಗು ಮತ್ತು ಹೊಟ್ಟೆಯ ಮೇಲೆ ಹಲ್ಲೆ ನಡಸಿದ್ದಾನೆ. ಈ ಸಂದರ್ಭದಲ್ಲಿ ಸಂಗೀತಾ ಕಿರುಚಾಡಿಕೊಂಡಿದ್ದು, ಸ್ಥಳೀಯರು ಅಲ್ಲಿ ಧಾವಿಸಿದ್ದಾರೆ. ವಿನೋದ್ ಅಲ್ಲಿಂದ ಓಡಿ ಹೋಗಿದ್ದಾನೆ.
ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರಿಂದ ಆಕೆ ಸಾವನ್ನಪ್ಪಿದ್ದಾರೆ. ಆಕೆಯ ಮಗಳು ವಿನೋದ್‍ನನ್ನು ತಡೆಯಲು ಪ್ರಯತ್ನಿಸಿದ್ದು, ಆದರೂ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿಯನ್ನು ಗುರುತಿಸಲಾಗಿದ್ದು, ಆತನನ್ನು ಶೀಘ್ರವೇ ಪತ್ತೆಹಚ್ಚಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ವೈದ್ಯ ಆತ್ಮಹತ್ಯೆ