ಚಿಕ್ಕಮಗಳೂರು: ಓರ್ವ ಪೊಲೀಸ್ ಸೇರಿದಂತೆ 17ಕ್ಕೂ ಹೆಚ್ಚು ಜನರಿಗೆ ಹುಚ್ಚುನಾಯಿ ಕಚ್ಚಿದ ಘಟನೆ ನಗರದಲ್ಲಿ ನಡೆದಿದ್ದು, ದಾಳಿಗೊಳಗಾದವರು ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದ ಕೋಟೆ ರಸ್ತೆ, ತೊಗರಿ ಅಂಕಲ್ ಸರ್ಕಲ್, ಲಕ್ಷ್ಮೀಶ ನಗರ, ಶಂಕರಪುರ ಹಾಗೂ ಎಂ.ಜಿ.ರಸ್ತೆಯ ದಾರಿಯಲ್ಲಿ ಹೋಗುತ್ತಿದ್ದ ಜನರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಪರಿಣಾಮ ದತ್ತಪೀಠದ ಬಂದೋಬಸ್ತ್ ಗಾಗಿ ತೆರಳಿದ್ದ ಓರ್ವ ಪೊಲೀಸ್ ಸೇರಿದಂತೆ ಲಕ್ಷ್ಮಮ್ಮ, ರೂಪ, ನವೀನ್, ನಾಗರಾಜ್ ಎಂಬವರ ಮೇಲೆ ದಾಳಿ ಮಾಡಿದೆ.
Advertisement
Advertisement
ನಾಯಿ ದಾಳಿಗೆ ಒಳಗಾದ ಪುಟ್ಟ ಮಕ್ಕಳು, ಮಹಿಳೆಯರು ಸೇರಿದಂತೆ 17ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
Advertisement
ಹುಚ್ಚು ನಾಯಿ ದಾಳಿಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಚಿಕ್ಕಮಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಒಂದು ವೇಳೆ ಬೇರೊಂದು ನಾಯಿ ಮೇಲೆ ಹುಚ್ಚು ನಾಯಿ ದಾಳಿ ಮಾಡಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತದೆ. ನಾವು ರಸ್ತೆಯಲ್ಲಿ ಸುರಕ್ಷಿತವಾಗಿ ನಡೆದಾಡುವುದೇ ಕಷ್ಟವಾಗುತ್ತದೆ. ಜಿಲ್ಲಾಡಳಿತ ಹಾಗೂ ನಗರಸಭೆ ಬೀದಿ ನಾಯಿಗಳ ಹಾವಳಿಗೆ ಅಂಕುಶ ಹಾಕಬೇಕೆಂದು ಹಾಗೂ ಹುಚ್ಚು ನಾಯಿಯನ್ನು ಹಿಡಿಯಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv