ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪ್ರಮಾಣ ವಚನಕ್ಕೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‍ನಲ್ಲಿ ಕಾಂಗ್ರೆಸ್- ಜೆಡಿಎಸ್‍ಗೆ ಭಾರೀ ಹಿನ್ನಡೆ ಆಗಿದೆ.
ರಾಜ್ಯಪಾಲರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತುಪಡಿಸಲು 15 ದಿನದ ಕಾಲಾವಕಾಶ ನೀಡಲಾಗಿತ್ತು. ಆದ್ರೆ ಸತತ 4 ಗಂಟೆಯ ವಿಚಾರಣೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇಂದು ಮಧ್ಯಾಹ್ನದೊಳಗೆ ಬಹುಮತ ಪತ್ರ ಸಲ್ಲಿಸುವುದು ಕಡ್ಡಾಯ ಅಂತಾ ಆದೇಶ ಹೊರಡಿಸಿದೆ.
Advertisement
ಒಂದು ವೇಳೆ ಬಹುಮತ ಸಾಬೀತುಪಡಿಸುವಲ್ಲಿ ಹೊಸ ಸರ್ಕಾರವನ್ನೇ ವಜಾ ಮಾಡೋದಾಗಿ ಅಂತಾ ಮೂವರು ನ್ಯಾಯಮೂರ್ತಿಗಳಿದ್ದ ಪೀಠದಿಂದ ಮಹತ್ವದ ಆದೇಶ ಹೊರಬಂದಿದೆ. ಈ ಸಂಬಂಧ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.