ಬೆಂಗಳೂರು: ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಸಾವಿನ ಕುರಿತು ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
Advertisement
ಮೈಸೂರಿನ ಟಿ.ಕೆ.ವಂಸತಕುಮಾರ್ ಬಂಧಿತ ಆರೋಪಿ. ಈತ ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದ. ಇದನ್ನೂ ಓದಿ: ಜನರು ತಮ್ಮ ಹಣವನ್ನು ಬ್ಯಾಂಕ್ಗಳಲ್ಲಿ ಠೇವಣಿ ಇಡಲು ಸಂಪೂರ್ಣ ವಿಶ್ವಾಸದೊಂದಿಗೆ ಮುಂದೆ ಬನ್ನಿ: ಮೋದಿ
Advertisement
ಆರೋಪಿಯು, ಸಿಡಿಎಸ್ ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ. `ಬಿಪಿನ್ ರಾವತ್ ಮೋದಿ ಗುಲಾಮತನದ ಒಂದು ತಲೆಮಾರು. ಚೀನಾ ದೇಶದವರು ಭಾರತ ಗಡಿಯಲ್ಲಿ ಬಂದು ಹಳ್ಳಿಗಳನ್ನು ನಿರ್ಮಿಸಿದಾಗ ಮೋದಿಯಂತೆ ಬುಡಬುಡಿಕೆ ಹೇಳಿಕೆ ಕೊಟ್ಟ ವ್ಯಕ್ತಿ ಬಿಪಿನ್ ರಾವತ್. ಇವರ ಸಾವಿನಿಂದ ದೇಶವಂತೂ ಪಾರಾಗಿದೆ’ ಎಂದು ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ.
Advertisement
Advertisement
ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನಿನ್ನೆ ಮೈಸೂರಿನಲ್ಲಿ ಬಂಧಿಸಲಾಯಿತು. ಈ ಸಂಬಂಧ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ವೇದಿಕೆ ಮೇಲೆ ಕಣ್ಣೀರಿಟ್ಟ ಮಾಧುಸ್ವಾಮಿ