BelgaumDistrictsKarnatakaLatestMain Post

ಅನಾರೋಗ್ಯದಿಂದ ಪತ್ನಿ ಸಾವು – ಮನನೊಂದು ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಚಿಕ್ಕೋಡಿ: ಅನಾರೋಗ್ಯದಿಂದಾಗಿ ಪತ್ನಿ ಸಾವನ್ನಪ್ಪಿದ ಹಿನ್ನೆಲೆ ಮನನೊಂದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಸದಾಶಿವ ರಾಮಪ್ಪ ಕಾಂಬಳೆ (26) ಎಂದು ಗುರುತಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ಎರಡು ವರ್ಷದ ಹಿಂದೆಯಷ್ಟೇ ಸದಾಶಿವ ರಾಮಪ್ಪ ಕಾಂಬಳೆ, ರೂಪಾ ಅವರನ್ನು ವಿವಾಹವಾಗಿದ್ದರು. ಆದರೆ ಅನಾರೋಗ್ಯ ಕಾರಣ ರೂಪ ಅವರು ಕಳೆದ ಎರಡು ದಿನದ ಹಿಂದೆಯಷ್ಟೇ ನಿಧನರಾಗಿದ್ದರು. ಇದನ್ನೂ ಓದಿ: ದೆಹಲಿಗೆ ಹೊರಟ ಬಿಎಸ್‌ವೈ – ಇಂದು ಸಂಜೆ ಮೋದಿ ಭೇಟಿ

crime

ಇದರಿಂದ ಮನನೊಂದು ಸದಾಶಿವ ರಾಮಪ್ಪ ಕಾಂಬಳೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ. ಕೂಡಲೇ ಅವರನ್ನು ವಿಜಯಪುರ ಜಿಲ್ಲೆ ಖಾಸಗಿ ಆಸ್ಪತ್ರೆಗೆ ಸದಾಶಿವ ದಾಖಲು ಮಾಡಲಾಗಿತ್ತು. ಆದರೆ ಅವರ ದೇಹ 80 ರಷ್ಟು ಪ್ರತಿಶತದಷ್ಟು ಬೆಂಕಿಯಿಂದ ಸುಟ್ಟುಹೋಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ರಾತ್ರಿ ಆಸ್ಪತ್ರೆಯಲ್ಲಿಯೇ ಸದಾಶಿವ ರಾಮಪ್ಪ ಕಾಂಬಳೆ ಅವರು ಕೊನೆಯುಸಿರೆಳೆದಿದ್ದಾರೆ.

ಒಟ್ಟಾರೆ ಎರಡು ವರ್ಷದ ಹಿಂದೆ ಸಪ್ತಪದಿ ತುಳಿದಿದ್ದ ಈ ಜೋಡಿ ಇದೀಗ ಸಾವಿನಲ್ಲೂ ಒಂದಾಗಿದ್ದಾರೆ. ಇನ್ನೂ ಐಗಳಿ ಪೊಲೀಸ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪುರುಷರೊಂದಿಗೆ ಸೆಕ್ಸ್ – ವ್ಯಕ್ತಿಗೆ ಒಂದೇ ಬಾರಿಗೆ ಕೊರೊನಾ, ಮಂಕಿಪಾಕ್ಸ್, HIV ಪಾಸಿಟಿವ್‌

Live Tv

Leave a Reply

Your email address will not be published.

Back to top button